ಜೂನ್‌ 1ರಿಂದ ಫುಟ್‌ಬಾಲ್‌ ಟೂರ್ನಿ

7

ಜೂನ್‌ 1ರಿಂದ ಫುಟ್‌ಬಾಲ್‌ ಟೂರ್ನಿ

Published:
Updated:

ನವದೆಹಲಿ: ಚೊಚ್ಚಲ ಆವೃತ್ತಿಯ ಹೀರೊ ಇಂಟರ್‌ ಕಾಂಟಿನೆಂಟಲ್‌ ಕಪ್‌ ಫುಟ್‌ಬಾಲ್‌ ಟೂರ್ನಿ ಜೂನ್‌ 1ರಿಂದ 10ರವರೆಗೆ ಮುಂಬೈನಲ್ಲಿ ನಡೆಯಲಿದೆ.

ಟೂರ್ನಿಯಲ್ಲಿ ಭಾರತ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್‌ ಮತ್ತು ತೈಪೆ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ. ಮುಂಬೈ ಫುಟ್‌ಬಾಲ್‌ ಅರೆನಾದಲ್ಲಿ ಪಂದ್ಯಗಳು ಜರುಗಲಿವೆ.

ಭಾರತ ತಂಡ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ 97ನೇ ಸ್ಥಾನದಲ್ಲಿದೆ. ಜೂನ್‌ 2016ರಿಂದ ನವೆಂಬರ್ 2017ರ ಅವಧಿಯಲ್ಲಿ ತಂಡ ಸತತ 12 ಪಂದ್ಯಗಳಲ್ಲಿ ಗೆದ್ದ ಸಾಧನೆ ಮಾಡಿತ್ತು.

ದಕ್ಷಿಣ ಆಫ್ರಿಕಾ ತಂಡ ಹಿಂದಿನ ಮೂರು ಫಿಫಾ ವಿಶ್ವಕಪ್‌ ಟೂರ್ನಿಗಳಲ್ಲಿ ಭಾಗವಹಿಸಿತ್ತು. ನ್ಯೂಜಿಲೆಂಡ್‌ ತಂಡ ಎರಡು ಬಾರಿ ವಿಶ್ವಕಪ್‌ನಲ್ಲಿ ಆಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry