ಬೆಳ್ಳುಬ್ಬಿ ಬೆಂಬಲಿಗರ ಆಕ್ರೋಶ

7

ಬೆಳ್ಳುಬ್ಬಿ ಬೆಂಬಲಿಗರ ಆಕ್ರೋಶ

Published:
Updated:

ವಿಜಯಪುರ: ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಅವರಿಗೆ ಟಿಕೆಟ್ ತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಅವರ ಬೆಂಬಲಿಗರು ಬಸ್ಸುಗಳ ಮೇಲೆ ಶುಕ್ರವಾರ ಕಲ್ಲು ತೂರಾಟ ನಡೆಸಿದ್ದಾರೆ.

ಕೊಲ್ಹಾರ ಪಟ್ಟಣದ ಯುಕೆಪಿ ಕ್ರಾಸ್‌ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಹುಬ್ಬಳ್ಳಿ–ವಿಜಯಪುರ ಹೆದ್ದಾರಿ ಬಂದ್‌ ಮಾಡಿದರು. ಈ ಸಂದರ್ಭ ಸಾರಿಗೆ ಸಂಸ್ಥೆಯ ಬಸ್ಸುಗಳ ಮೇಲೆ ಕಲ್ಲು ತೂರಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಅಂಗಡಿಗಳ ಬಾಗಿಲು ಮುಚ್ಚಲಾಯಿತು.

ಬಸವನಬಾಗೇವಾಡಿ ಪಟ್ಟಣದಲ್ಲಿ, ಬೆಳ್ಳುಬ್ಬಿ ಬೆಂಬಲಿಗರು ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಬಿಜೆಪಿ ಮುಖಂಡರಾದ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧ ಘೋಷಣೆ ಕೂಗಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry