ರಸ್ತೆ ಕಾಮಗಾರಿ ಮುಂದುವರಿಸಲ್ಲ: ಬಿಬಿಎಂಪಿ

7

ರಸ್ತೆ ಕಾಮಗಾರಿ ಮುಂದುವರಿಸಲ್ಲ: ಬಿಬಿಎಂಪಿ

Published:
Updated:

ಬೆಂಗಳೂರು: ‘ಪಟ್ಟಂದೂರು ಅಗ್ರಹಾರದ ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ ಕೈಗೊಳ್ಳಲಾಗಿರುವ 80 ಅಡಿ ವಿಸ್ತೀರ್ಣದ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸದ್ಯ ಮುಂದುವರಿಸುವುದಿಲ್ಲ’ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೈಕೋರ್ಟ್‌ಗೆ ಶುಕ್ರವಾರ ತಿಳಿಸಿದೆ.

‘ಬಿಬಿಎಂಪಿ ನಿಯಮ ಉಲ್ಲಂಘಿಸಿ ರಸ್ತೆ ನಿರ್ಮಾಣ ಮಾಡುತ್ತಿದೆ’ ಎಂದು ಆರೋಪಿಸಿ ‘ವೈಟ್‌ಫೀಲ್ಡ್ ರೈಸಿಂಗ್ ಟ್ರಸ್ಟ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯ

ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ‘ರಸ್ತೆ ನಿರ್ಮಾಣವಾಗುತ್ತಿರುವ ಸ್ಥಳ ಕೆರೆಗೆ ಸೇರಿದೆಯೇ ಅಥವಾ ಖಾಸಗಿಯವರಿಗೆ ಸೇರಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಸಂಬಂಧಪಟ್ಟ ಇಲಾಖೆಯಿಂದ ಈ ಕುರಿತಂತೆ ಮಾಹಿತಿ ಕೇಳಲಾಗಿದೆ. ಅದರೆ ಇನ್ನೂ ಮಾಹಿತಿ ಕೈಸೇರಿಲ್ಲ. ವರದಿ ಕೈಸೇರುವವರೆಗೂ ಕಾಮಗಾರಿ ಮುಂದುವರಿಸುವುದಿಲ್ಲ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry