ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ: ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Last Updated 21 ಏಪ್ರಿಲ್ 2018, 9:48 IST
ಅಕ್ಷರ ಗಾತ್ರ

ನವದೆಹಲಿ: ಹನ್ನೆರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸಲು ಅವಕಾಶ ಮಾಡಿಕೊಡಲು ಸುಗ್ರೀವಾಜ್ಞೆ ಜಾರಿಗೆ ತರಲು ಕೇಂದ್ರ ಸಚಿವ ಸಂಪುಟ ಶನಿವಾರ ಅನುಮೋದನೆ ನೀಡಿದೆ.

ಗಲ್ಲು ಶಿಕ್ಷೆ ವಿಧಿಸಲು ಅವಕಾಶ ಮಾಡಿಕೊಡಲು ಸುಗ್ರೀವಾಜ್ಞೆ ಜಾರಿಗೆ ತರುವ ಬಗ್ಗೆ ಸಚಿವ ಸಂಪುಟ ಚರ್ಚೆ ನಡೆಸಿದ್ದು, ಭಾರತೀಯ ದಂಡ ಸಂಹಿತೆ (ಐಪಿಸಿ), ಎವಿಡಿಯನ್ಸ್ ಆಕ್ಟ್‌, ಅಪರಾಧ ದಂಡ ಪ್ರಕ್ರಿಯಾ ಸಂಹಿತೆಗೆ (ಸಿಆರ್‌ಪಿಸಿ) ಮತ್ತು ಪೋಕ್ಸೊ(ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ) ಕಾಯ್ದೆಗೆ ತಿದ್ದುಪಡಿ ಮಾಡಲು ಹಾಗೂ ನಿಬಂಧನೆಗಳನ್ನು ಸೇರ್ಪಡೆಗೊಳಿಸಿ, ಮಕ್ಕಳ ಅತ್ಯಾಚಾರ ಎಸಗುವ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆ ತರಲು ಸಭೆ ಅನುಮೋದಿಸಿದೆ ಎಂದು ಮೂಲಗಳು ತಿಳಿಸಿವೆ.

‘ಅತ್ಯಾಚಾರಿಗಳಿಗೆ ಸದ್ಯ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ) ಕಾಯ್ದೆಯಡಿ ಜೀವಾವಧಿ ಶಿಕ್ಷೆಯನ್ನಷ್ಟೇ ವಿಧಿಸಲು ಅವಕಾಶವಿದೆ.

ಕಠುವಾ ಮತ್ತು ಉನ್ನಾವ್ ಅತ್ಯಾಚಾರ ಪ್ರಕರಣಗಳ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂಬ ಒತ್ತಾಯ ಹೆಚ್ಚುತ್ತಿರುವ ಸಂದರ್ಭದಲ್ಲೇ ಸರ್ಕಾರ ಈ ವಿಚಾರವನ್ನು ಚರ್ಚೆಗೆ ಎತ್ತಿಕೊಂಡಿದೆ’ ಎಂದು ಕಾನೂನು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಮಾಹಿತಿ ನೀಡಿದ್ದರು.

ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಈ ಮಾಹಿತಿ ನೀಡಿತ್ತು.
‘12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲು ಶಿಕ್ಷೆ ವಿಧಿಸಲು ಅನುಕೂಲವಾಗುವಂತೆ ಕಾನೂನಿಗೆ ತಿದ್ದುಪಡಿ ತರಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್.ನರಸಿಂಹ ಮಾಹಿತಿ ನೀಡಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬಳಿಕ ಕೇಂದ್ರ ಸಂಪುಟ ಸಭೆ ಈ ನಿರ್ಣಯ ಕೈಗೊಂಡಿದೆ. ಬಳಿಕ, ಸುಗ್ರೀವಾಜ್ಞೆಯ ತರಲು ನೀಡಿರುವ ಅನುಮೋದನೆಯನ್ನು ಅಂಕಿತಕ್ಕಾಗಿ ರಾಷ್ಟ್ರಪತಿಗೆ ಕಳುಹಿಸಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT