ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಹುದ್ದೆಗಳಲ್ಲಿ ಕ್ರೀಡಾಪಟುಗಳಿಗೆ ಶೇ 2ರಷ್ಟು ಮೀಸಲು: ತೆಲಂಗಾಣ ಸರ್ಕಾರ ಘೋಷಣೆ

Last Updated 21 ಏಪ್ರಿಲ್ 2018, 10:43 IST
ಅಕ್ಷರ ಗಾತ್ರ

ಹೈದರಾಬಾದ್: ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 2ರಷ್ಟು ಮೀಸಲಾತಿ ನೀಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಶನಿವಾರ ಘೋಷಣೆ ಮಾಡಿದರು.

ಗೋಲ್ಟ್‌ಕೋಸ್ಟ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಿಂದಿರುಗಿರುವ 18 ಕ್ರೀಡಾಪಟುಗಳ ತಂಡ ಭೇಟಿ ಮಾಡಿದ ವೇಳೆ ಅವರನ್ನು ಅಭಿನಂದಿಸಿ ಸಿಎಂ ಈ ಹೇಳಿಕೆ ನೀಡಿದ್ದಾರೆ.

ಸರ್ಕಾರ ಕ್ರೀಡಾಪಟುಗಳಿಗೆ ಕ್ರೀಡಾಕೋಟಾದಡಿ ಈಗಾಗಲೇ ಶೇ 2ರಷ್ಟು ಮೀಸಲಾತಿಯನ್ನು ಶಿಕ್ಷಣ ಸಂಸ್ಥೆಗಳಲ್ಲಿ ನೀಡಿದ್ದು, ಜಾರಿಯಲ್ಲಿದೆ. ಈಗ ಮುಖ್ಯಮಂತ್ರಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರಿ ಹುದ್ದೆಯಲ್ಲೂ ಮೀಸಲು ನೀಡುವುದಾಗಿ ಹೇಳಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಬ್ಯಾಡ್ಮಿಂಡನ್‌ ತರಬೇತುದಾರ ಗೋಪಿಚಂದ್‌ ಮತ್ತು ಕಾಮನ್‌ವೆಲ್ತ್‌ ಕೂಟದಲ್ಲಿ ಚಿನ್ನದ ಪದಕ ಗೆದ್ದ ಸೈನಾ ನೆಹ್ವಾಲ್‌, ಬೆಳ್ಳಿಗೆದ್ದ ಪಿ.ವಿ. ಸಿಂಧು, ಕಿದಂಬಿ ಶ್ರೀಕಾಂತ್‌, ಸಾತ್ವಿಕ್‌ ರಾಜ್‌ ರಂಕಿರೆಡ್ಡಿ ಸೇರಿದಂತೆ ಕ್ರೀಡಾಪಟುಗಳು ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದರು. ಈ ವೇಳೆ ಸಿಎಂ ಕ್ರೀಡಾಪಟುಗಳ ಸಾಧನೆಯನ್ನು ಪ್ರಶಂಸಿಸಿದ್ದಾರೆ.

ಹೈದರಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕ್ರೀಡಾಪಟುಗಳ ತಂಡ –ಪಿಟಿಐ ಚಿತ್ರ

ಸಹಕಾರ ನೀಡಿ, ಪ್ರೋತ್ಸಾಹಿಸಿದ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT