ಹಿಂದಿ ಅರ್ಥವಾಗುವುದಿಲ್ಲ, ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಟ್ವೀಟ್ ಮಾಡಿ ಸರ್: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸಲಹೆ

7

ಹಿಂದಿ ಅರ್ಥವಾಗುವುದಿಲ್ಲ, ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಟ್ವೀಟ್ ಮಾಡಿ ಸರ್: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸಲಹೆ

Published:
Updated:
ಹಿಂದಿ ಅರ್ಥವಾಗುವುದಿಲ್ಲ, ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಟ್ವೀಟ್ ಮಾಡಿ ಸರ್: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಪಿ.ಮುರುಳಿಧರ್ ರಾವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉಲ್ಲೇಖಿಸಿ ಹಿಂದಿಯಲ್ಲಿ ಟ್ಟೀಟ್‌ ಮಾಡಿದ್ದಾರೆ. ಸಿಎಂ ‘ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಟ್ವೀಟ್ ಮಾಡಿ ಸರ್, ಹಿಂದಿ ಅರ್ಥವಾಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.

‘ಸಿದ್ದರಾಮಯ್ಯನವರೇ ಹೆದರಿಬಿಟ್ಟಿರಾ?, ಬಹಳ ಕಷ್ಟಪಟ್ಟು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರವನ್ನು ಆಯ್ದುಕೊಂಡಿದ್ದಿರಿ, ಈಗ ಅಲ್ಲಿಯೂ ಸೋಲುವ ಸೂಚನೆಗಳು ಕಂಡಾಗ ಬೇರೆ ಕ್ಷೇತ್ರ ಹುಡುಕುತ್ತಿದ್ದೀರಿ. ನಾನು ನಿಮ್ಮ ಸಂದೇಹವನ್ನು ನಿವಾರಿಸುತ್ತೇನೆ. ನಿಮ್ಮ ಎರಡು ಕ್ಷೇತ್ರಗಳು ಮಾತ್ರವಲ್ಲ, ಇಡೀ ಕರ್ನಾಟಕವೇ ಕಾಂಗ್ರೆಸ್‌ ಮುಕ್ತ ಮಾಡಲು ಹೊರಟಿದೆ’ ಎಂದು ಪಿ.ಮುರುಳಿಧರ್‌ ರಾವ್‌ ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಈ ಟ್ವೀಟ್‌ಗಳಿಗೆ ಪರ–ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಕೆಲವರು ಸಿದ್ದರಾಮಯ್ಯ ಅವರ ಕನ್ನಡ ಅಭಿಮಾನಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ‘ರಾಹುಲ್‌ ಗಾಂಧಿಗೂ ಕನ್ನಡದಲ್ಲಿ ಟ್ವೀಟ್‌ ಮಾಡುವಂತೆ ಹೇಳಿ’ ಎಂದು ಸಿಎಂಗೆ ಸಲಹೆ ನೀಡಿದ್ದಾರೆ.

‘ನಾನು ಬಿಜೆಪಿಯ ಕಟ್ಟಾ ಬೆಂಬಲಿಗ. ಆದರೆ, ಯಾವುದೇ ಕಾಲಕ್ಕೂ ಪಕ್ಷಕ್ಕಿಂತ ಭಾಷೆ ಮೇಲು. ಈ ಟ್ವೀಟ್‌ನಿಂದಾಗಿ ನಾನು ಕಾಂಗ್ರೆಸ್‌ಗೆ ಮತ ನೀಡುತ್ತೇನೆ’ ಎಂದು ಶಮಂತಕ ಸೊಮಯಾಜಿ ಎಂಬುವರು ಪ್ರತಿಕ್ರಿಯೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry