ಬಿಜೆಪಿ: 40 ಮಂದಿ ತಾರಾ ಪ್ರಚಾರಕರು

7

ಬಿಜೆಪಿ: 40 ಮಂದಿ ತಾರಾ ಪ್ರಚಾರಕರು

Published:
Updated:

ಬೆಂಗಳೂರು: ರಾಜ್ಯದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು 40 ಮಂದಿ ತಾರಾ ಪ್ರಚಾರಕರನ್ನು ಬಿಜೆಪಿ ಪಟ್ಟಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಸಿನಿಮಾ ನಟಿ ಹೇಮಾ ಮಾಲಿನಿ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಪಕ್ಷದ ರಾಷ್ಟ್ರಿಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‌, ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌, ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಮಾಹಿತಿ ಮತ್ತು ಪ್ರಸಾರ ಸಚಿವೆ ಸ್ಮೃತಿ ಇರಾನಿ , ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಹಾಗೂ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರು ಮತ ಸೆಳೆಯಲು ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ.

ಸಿನಿಮಾ ನಟಿಯರಾದ ಶ್ರುತಿ, ತಾರಾ ಅನೂರಾಧ ಅವರ ವರ್ಚಸ್ಸನ್ನೂ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲು ಪಕ್ಷವು ನಿರ್ಧರಿಸಿದೆ.

ಪಟ್ಟಿಯಲ್ಲಿ ಕೇಂದ್ರ ಕೌಶಲ ಅಭಿವೃದ್ಧಿ ಸಚಿವ ಅನಂತ ಕುಮಾರ್‌ ಹೆಗಡೆ ಹೆಸರು 25ನೇ ಸ್ಥಾನದಲ್ಲಿ ಹಾಗೂ ಎಸ್‌.ಎಂ.ಕೃಷ್ಣ ಹೆಸರು 26ನೇ ಸ್ಥಾನದಲ್ಲಿದೆ.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ಲಾಲ್‌, ರಾಜ್ಯದ ‍ಪ್ರಮುಖರಾದ ಬಿ.ಎಸ್‌.ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌, ಕೆ.ಎಸ್‌ಈಶ್ವರಪ್ಪ, ಸಂಸದ ಶ್ರೀರಾಮುಲು ಹೆಸರೂ ಪಟ್ಟಿಯಲ್ಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry