ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸುಧಾರಣಾ ಕ್ರಮದಿಂದ ಕ್ಷಿಪ್ರ ಪ್ರಗತಿ’

Last Updated 21 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ‘ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿರುವುದರಿಂದ ಭಾರತವು ಕ್ಷಿಪ್ರಗತಿಯಲ್ಲಿ ಬೆಳವಣಿಗೆ ಸಾಧಿಸುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಹೊರಹೊಮ್ಮುತ್ತಿದೆ’ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಎಸ್‌.ಸಿ. ಗರ್ಗ್‌ ತಿಳಿಸಿದ್ದಾರೆ.

‘ಭಾರತದ ಆರ್ಥಿಕತೆ: ದೂರದೃಷ್ಟಿ ಮತ್ತು ಸವಾಲುಗಳು’ ವಿಷಯದ ಕುರಿತಾದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯು ಆರ್ಥಿಕ ಮತ್ತು ರಾಜಕೀಯವಾಗಿ ಐತಿಹಾಸಿಕ ಸಾಧನೆ’ ಎಂದು ಬಣ್ಣಿಸಿದ್ದಾರೆ.

‘ದೇಶದ ತೆರಿಗೆ ವ್ಯವಸ್ಥೆ ಮತ್ತು ಆರ್ಥಿಕ ಸುಧಾರಣೆಯಲ್ಲಿ ಹಿಂದೆಂದೂ ಕಾಣದ ಅತಿದೊಡ್ಡ ಬದಲಾವಣೆ ಇದಾಗಿದೆ (ಜಿಎಸ್‌ಟಿ). ಇದರಿಂದ ಇನ್ನಷ್ಟು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಉತ್ತೇಜನ ದೊರೆತಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT