ಮೋದಿ–ಮರ್ಕೆಲ್ ಭೇಟಿ

7

ಮೋದಿ–ಮರ್ಕೆಲ್ ಭೇಟಿ

Published:
Updated:
ಮೋದಿ–ಮರ್ಕೆಲ್ ಭೇಟಿ

ಬರ್ಲಿನ್: ಜರ್ಮನಿಯ ಚಾನ್ಸಲರ್ ಏಂಜಲಾ ಮರ್ಕೆಲ್ ಅವರ ಜೊತೆ ಫಲಪ್ರದ ಮಾತುಕತೆ ನಡೆಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

ದ್ವಿಪಕ್ಷೀಯ ಸಹಕಾರಕ್ಕೆ ಸಂಬಂಧಿಸಿದಂತೆ ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಸಲಾಯಿತು. ಜಾಗತಿಕ ವಿಷಯಗಳೂ ಚರ್ಚೆಗೆ ಬಂದವು ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಮೋದಿ ಅವರು ಶನಿವಾರ ಜರ್ಮನಿಗೆ ಬಂದಿದ್ದರು.

ಭಾರತ–ಜರ್ಮನಿ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ಮಾರ್ಗಗಳನ್ನು ಚರ್ಚಿಸಲಾಯಿತು ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ. ಮರ್ಕೆಲ್ ಅವರು ಜರ್ಮನಿಯ ಚಾನ್ಸಲರ್ ಆಗಿ ನಾಲ್ಕನೇ ಬಾರಿ ಆಯ್ಕೆಯಾದ ಬಳಿಕ ಉಭಯ ನಾಯಕರ ನಡುವೆ ನಡೆದ ಮೊದಲ ಮಾತುಕತೆ ಇದಾಗಿದೆ.

ಜರ್ಮನಿಯ ಅಧ್ಯಕ್ಷ ಫ್ರಾಂಕ್ ವಾಲ್ಟರ್ ಅವರು ಕಳೆದ ತಿಂಗಳು ಭಾರತಕ್ಕೆ ಭೇಟಿ ನೀಡಿದ್ದರು. ಎರಡೂ ದೇಶಗಳ ನಡುವಿನ ಆರ್ಥಿಕ ಹಾಗೂ ರಾಜತಾಂತ್ರಿಕ ಸಂಬಂಧವನ್ನು ಇನ್ನಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry