ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿ ಲಂಕೇಶ್‌ ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿಯ ವಶ

Last Updated 30 ಆಗಸ್ಟ್ 2018, 13:17 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಗಣೇಶಪುರದ ನಿವಾಸಿ ಸಾಗರ ಲಾಖೆ (30) ಎಂಬುವವರನ್ನು ಪ್ರಗತಿಪರ ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಬುಧವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಹತ್ಯೆ ಪ್ರಕರಣದ ಆರೋಪಿಗಳಿಗೆ ತನ್ನ ರೆಸಾರ್ಟ್‌ನಲ್ಲಿ ಆಶ್ರಯ ನೀಡಿದ ಆರೋಪದ ಮೇಲೆ ಈಗಾಗಲೇ ಬಂಧಿತನಾಗಿರುವ ಭರತ ಕುರ್ನೆ ಅವರ ಬಳಿ ಸಾಗರ ಕೆಲಸಕ್ಕಿದ್ದ. ರೆಸಾರ್ಟ್‌ನ ಉದ್ಯಾನದ ಉಸ್ತುವಾರಿ ವಹಿಸಿಕೊಂಡಿದ್ದ ಎನ್ನಲಾಗುತ್ತಿದೆ.

ಭರತ ಕುರ್ನೆ ಅವರ ಜೊತೆ ನಿರಂತರವಾಗಿ ನಡೆಸಿದ ಫೋನ್‌ ಸಂಭಾಷಣೆಗಳ ಆಧಾರದ ಮೇಲೆ ಸಾಗರನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT