ಮುಂಬೈ: ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲರ್‌ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ವೇಗದ ಬೌಲರ್ ಇರ್ಫಾನ್ ಪಠಾಣ್ ‘ಮುಖ್ಯ ಬೌಲರ್ ಭುವನೇಶ್ವರ್ ಕುಮಾರ್ ಅನುಪಸ್ಥಿತಿಯಲ್ಲೂ ಇತರ ಬೌಲರ್‌ಗಳು ಉತ್ತಮ ಸಾಮರ್ಥ್ಯ ತೋರಿದ್ದಾರೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಅವರು ಪತ್ರಕರ್ತರ ಜೊತೆ ಮಾತನಾಡಿ ‘ಭಾರತದ ವೇಗದ ಬೌಲರ್‌ಗಳಲ್ಲಿ ಜಸ್‌ಪ್ರೀತ್ ಬೂಮ್ರಾ ಮತ್ತು ಭುವನೇಶ್ವರ್ ಕುಮಾರ್ ಪ್ರಮುಖರು. ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ತಂಡದ ಮುಖ್ಯ ಅಸ್ತ್ರ. ಕಳೆದ ಮೂರು ಪಂದ್ಯಗಳಲ್ಲಿ ಅವರು ಆಡಿಲ್ಲ. ಆದರೂ ತಂಡ ಬೌಲಿಂಗ್ ದಾಳಿಯಲ್ಲಿ ಸ್ಥಿರತೆಯನ್ನು ಕಾಯ್ದುಕೊಂಡಿರುವುದು ಗಮನಾರ್ಹ’ ಎಂದು ಹೇಳಿದರು.

‘ತಂಡದಲ್ಲಿ ಇರುವ ಬೌಲರ್‌ಗಳು ಯಾರೂ ಹೆಚ್ಚು ಹೆಸರು ಮಾಡಿದವರು ಅಲ್ಲ. ರಶೀದ್ ಖಾನ್ ಮತ್ತು ಶಕೀಬ್ ಅಲ್ ಹಸನ್ ಅವರನ್ನು ಹೊರತುಪಡಿಸಿದರೆ ಇತರ ಯಾರೂ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿಲ್ಲ. ಸಿದ್ಧಾರ್ಥ್ ಕೌಲ್ ಮತ್ತು ಸಂದೀಪ್ ಶರ್ಮಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಬ್ಯಾಟ್ಸ್‌ಮನ್‌ಗಳನ್ನು ಕೂಡ ಕಟ್ಟಿ ಹಾಕುತ್ತಿದ್ದಾರೆ’ ಎಂದು ಪಠಾಣ್ ಹೇಳಿದರು.

ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಲೆಗ್ ಸ್ಪಿನ್ನರ್ ಮಯಂಕ್ ಮಾರ್ಕಂಡೆ ಅವರ ಬಗ್ಗೆಯೂ ಪಠಾಣ್ ಮೆಚ್ಚುಗೆಯ ನುಡಿಗಳನ್ನಾಡಿದರು.

‘ಮಾರ್ಕಂಡೆ ನಿರಂತರವಾಗಿ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ. ಸರಿಯಾದ ಜಾಗದಲ್ಲಿ ಚೆಂಡನ್ನು ಹಾಕಿ ತಿರುವು ಪಡೆಯುವಂತೆ ಮಾಡುವ ಸವಾಲನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ’ ಎಂದು ಪಠಾಣ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.