ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು ನಾಮನಿರ್ದೇಶನ

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ 17 ಸಂಸದರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದಾರೆ.
ಕೊರಿಯಾ ಯುದ್ಧ ತಡೆದಿರುವುದಕ್ಕಾಗಿ ಮತ್ತು ಆ ದ್ವೀಪದಲ್ಲಿ ಪರಮಾಣು ನಿಶ್ಯಸ್ತ್ರೀಕರಣಕ್ಕೆ ಕೈಗೊಂಡ ಕ್ರಮಗಳಿಂದ ಶಾಂತಿ ನೆಲೆಸಲು ಪ್ರಯತ್ನಿಸಿದ್ದಕ್ಕಾಗಿ ಈ ಪ್ರಶಸ್ತಿ ನೀಡಬೇಕು ಎಂದು ಸಂಸದರು ತಿಳಿಸಿದ್ದಾರೆ.
‘ಅಕ್ರಮ ಶಸ್ತ್ರಾಸ್ತ್ರ ಯೋಜನೆಯನ್ನು ಅಂತ್ಯಗೊಳಿಸುವಂತೆ ಟ್ರಂಪ್ ಅವರು ಅಧಿಕಾರ ಸ್ವೀಕರಿಸಿದ ದಿನದಿಂದಲೇ ಉತ್ತರ ಕೊರಿಯಾ ಮೇಲೆ ಒತ್ತಡ ಹೇರಿದ್ದರು. ಜತೆಗೆ ಆ ದೇಶದ ಮೇಲೆ ನಿರ್ಬಂಧ ಹೇರಲು ಅಂತರರಾಷ್ಟ್ರೀಯ ಸಮುದಾಯವನ್ನು ಒಗ್ಗೂಡಿಸಿದ್ದರು’ ಎಂದು ಸಂಸದರು ನೊಬೆಲ್ ಸಮಿತಿ ಅಧ್ಯಕ್ಷ ಬೆರಿಟ್ ರೀಸ್ ಆ್ಯಂಡರ್ಸನ್ ಅವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.