ವಿಶ್ವಸಂಸ್ಥೆಯಲ್ಲಿ ಮತ್ತೆ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಪಾಕಿಸ್ತಾನ: ಭಾರತ ಆಕ್ಷೇಪ

7

ವಿಶ್ವಸಂಸ್ಥೆಯಲ್ಲಿ ಮತ್ತೆ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಪಾಕಿಸ್ತಾನ: ಭಾರತ ಆಕ್ಷೇಪ

Published:
Updated:

ವಿಶ್ವಸಂಸ್ಥೆ: ಪಾಕಿಸ್ತಾನವು ಕಾಶ್ಮೀರ ವಿಷಯವನ್ನು ವಿಶ್ವಸಂಸ್ಥೆಯಲ್ಲಿ ಮತ್ತೆ ಪ್ರಸ್ತಾಪಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆಯ ಮಾಹಿತಿ ಕುರಿತಾದ ಸಮಿತಿ ಸಭೆಯಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರತಿನಿಧಿ ಮಸೂದ್‌ ಅನ್ವರ್‌, ‘ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಇದು ಅಂತರರಾಷ್ಟ್ರೀಯ ಸಮುದಾಯಕ್ಕೆ ಆತಂಕ ತಂದಿರುವ ವಿಷಯ’ ಎಂದರು.

ಕಾಶ್ಮೀರ ವಿಷಯ ಪ್ರಸ್ತಾಪಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ಎಸ್‌. ಶ್ರೀನಿವಾಸ್‌, ‘ಸಮಿತಿಗೆ ಸಂಬಂಧಪಡದ ವಿಷಯವನ್ನು ಪಾಕಿಸ್ತಾನ ಪ್ರಸ್ತಾಪಿಸಿದೆ. ಪಾಕಿಸ್ತಾನದ ಹೇಳಿಕೆಯನ್ನು ತಿರಸ್ಕರಿಸುತ್ತೇವೆ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry