ಪ್ರಚಾರದ ವೇಳೆ ಕುಸಿದು ಬಿದ್ದ ಶಾಸಕ

7

ಪ್ರಚಾರದ ವೇಳೆ ಕುಸಿದು ಬಿದ್ದ ಶಾಸಕ

Published:
Updated:

ಬೆಂಗಳೂರು: ಜಯನಗರದಲ್ಲಿ ಗುರುವಾರ ಸಂಜೆ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ  ಕ್ಷೇತ್ರದ ಬಿಜೆಪಿ ಶಾಸಕ ಬಿ.ಎನ್‌. ವಿಜಯ ಕುಮಾರ್‌ ಕುಸಿದು ಬಿದ್ದಿದ್ದಾರೆ.

ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ‘ಅವರಿಗೆ ಹೃದಯಾಘಾತವಾಗಿದೆ. ಅವರ ಸ್ಥಿತಿ ಗಂಭೀರ

ವಾಗಿದೆ’ ಎಂದು ವೈದ್ಯರು ತಿಳಿಸಿದ್ದಾರೆ.

ತಿಂಗಳ ಹಿಂದೆ ವಿಜಯಕುಮಾರ್‌ ಅನಾರೋಗ್ಯಕ್ಕೆ ಒಳಗಾಗಿದ್ದರು. ಜಯದೇವ ಆಸ್ಪತ್ರೆಯಲ್ಲಿ ಸ್ಟೆಂಟ್‌ ಅಳವಡಿಸಲಾಗಿತ್ತು. ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದರು. ಕೆಲವು ದಿನ ವಿಶ್ರಾಂತಿ ಪಡೆದು ಚುನಾವಣಾ ಪ್ರಚಾರ ಆರಂಭಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry