ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿಗೆ ತೆರಳಲು ಅನುಮತಿ ನಿರಾಕರಿಸಿದ ಸುಪ್ರೀಂ ಕೋರ್ಟ್‌; ಜನಾರ್ದನ ರೆಡ್ಡಿ ಆಸೆಗೆ ತಣ್ಣೀರು

Last Updated 4 ಮೇ 2018, 10:12 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಅಂಗವಾಗಿ ಬಳ್ಳಾರಿಗೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಜನಾರ್ದನ ರೆಡ್ಡಿ ಮೇ 8, 9ರಂದು ಬಳ್ಳಾರಿಗೆ ತೆರಳಲು ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಶುಕ್ರವಾರ ಕೋರ್ಟ್‌ ಅರ್ಜಿ ವಿಚಾರಣೆ ನಡೆಸಿತು.

ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜರ್ನಾದನ ರೆಡ್ಡಿ ಅವರು ಚುನಾವಣೆಗಾಗಿ ಬಳ್ಳಾರಿಗೆ ಪ್ರವೇಶಿಸಬಾರದು ಎಂದು ಆದೇಶ ಹೊರಡಿಸಿದೆ.

ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸಂಬಂಧಿಸಿ ಮಗಳ ಮದುವೆ ಸೇರಿದಂತೆ ಹಲವು ಬಾರಿ ಸುಪ್ರೀಂ ಕೊರ್ಟ್‌ ಅನುಮತಿ ನೀಡಿತ್ತು. ಆದರೆ, ಈ ಬಾರಿ ಬಳ್ಳಾರಿಗೆ ತೆರಳಲು ಅನುಮತಿ ನೀಡಿಲ್ಲ. ಹಾಗಾಗಿ, ರೆಡ್ಡಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಿಲ್ಲ.

ಅಕ್ರಮ ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿ 2011 ಹಾಗೂ 2015ರಲ್ಲಿ ಜನಾರ್ದನ ರೆಡ್ಡಿ ಜೈಲು ಶಿಕ್ಷೆ ಎದುರಿಸಿದ್ದಾರೆ. 2015ರಲ್ಲಿ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿತ್ತು.

ಇನ್ನಷ್ಟು... 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT