ಅಕ್ರಮ ಸಂಪತ್ತು ಪತ್ತೆ ಹಚ್ಚಿ ನನ್ನನ್ನು ಜೈಲಿಗೆ ಹಾಕಿ: ಮಲ್ಲಿಕಾರ್ಜುನ ಖರ್ಗೆ

7

ಅಕ್ರಮ ಸಂಪತ್ತು ಪತ್ತೆ ಹಚ್ಚಿ ನನ್ನನ್ನು ಜೈಲಿಗೆ ಹಾಕಿ: ಮಲ್ಲಿಕಾರ್ಜುನ ಖರ್ಗೆ

Published:
Updated:
ಅಕ್ರಮ ಸಂಪತ್ತು ಪತ್ತೆ ಹಚ್ಚಿ ನನ್ನನ್ನು ಜೈಲಿಗೆ ಹಾಕಿ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ಖರ್ಗೆ ಅಕ್ರಮ ಸಂಪತ್ತು ಹೊಂದಿದ್ದಾರೆ ಎಂದು ಮೋದಿ ಹೇಳಿದ್ದಾರೆ. ಅರೆ, ಮೋದಿ ಅವರೇ ನಿಮ್ಮದೇ ಸರ್ಕಾರ ಆಡಳಿತದಲ್ಲಿದೆ. ಅಕ್ರಮ ಸಂಪತ್ತು ಪತ್ತೆ ಹಚ್ಚಿ ನನ್ನನ್ನು ಜೈಲಿಗೆ ಹಾಕಿ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದರು.

ಕಲಬುರ್ಗಿ ಜಿಲ್ಲೆಯ ಕಾಳಗಿಯಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಮೋದಿ, ಅಮಿತ್ ಶಾ ಸುಳ್ಳಿನ ಸರದಾರರು. ನಮ್ಮನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. ಮೋದಿ ಅಭಿವೃದ್ಧಿ ಬಗ್ಗೆ ಹೇಳಿಕೊಂಡು ಮತಯಾಚಿಸದೆ, ಸುಳ್ಳು ಹೇಳಿ ಮತ ಯಾಚಿಸುತ್ತಿದ್ದಾರೆ. ಅವರು ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್, ಬಜರಂಗ ದಳದ ಕಪಿ ಮುಷ್ಟಿಯಲ್ಲಿ ಇದ್ದಾರೆ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಖರ್ಗೆ ಆಪಾದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry