ಲಕ್ಷ ಜನರು ಸೇರುವ ನಿರೀಕ್ಷೆ

7
ಪ್ರಧಾನಿ ನಾಳೆ ಮಂಗಳೂರಿಗೆ: ಭರದ ಸಿದ್ಧತೆ

ಲಕ್ಷ ಜನರು ಸೇರುವ ನಿರೀಕ್ಷೆ

Published:
Updated:

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನಗರಕ್ಕೆ ಬರಲಿದ್ದು, ಬಿಜೆಪಿ ಸಮಾವೇಶಕ್ಕಾಗಿ ಸಿದ್ಧತೆಗಳು ಭರದಿಂದ ಸಾಗಿವೆ. ಇಲ್ಲಿನ ನೆಹರೂ ಮೈದಾನದಲ್ಲಿ ವೇದಿಕೆ ಸಿದ್ಧಪಡಿಸಲಾಗುತ್ತಿದ್ದು, ಗುರುವಾರ ಸಂಜೆ ಸಂಸದ ನಳಿನ್‌ಕುಮಾರ್ ಕಟೀಲ್ ಸೇರಿದಂತೆ ಅನೇಕರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ಪ್ರಧಾನಿ ಮೋದಿ ಶನಿವಾರ ಸಂಜೆ 5.30ಕ್ಕೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದು, ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಅಂದು ಬೆಳಿಗ್ಗೆ ಶಿವಮೊಗ್ಗದಲ್ಲಿ ಕಾರ್ಯಕ್ರಮ ಮುಗಿಸಿ, ಪ್ರಧಾನಿ ಮಂಗಳೂರಿಗೆ ಬರಲಿದ್ದಾರೆ. ರಾಷ್ಟ್ರ ಹಾಗೂ ರಾಜ್ಯದ ಇತರ ನಾಯಕರು ಪಾಲ್ಗೊಳ್ಳಲಿದ್ದಾರೆ.

ಈಗಾಗಲೇ ಪ್ರಧಾನಿ ಮೋದಿ ಉಡುಪಿಯಲ್ಲಿ ಸಮಾವೇಶ ನಡೆಸಿದ್ದು, ಇದೀಗ ಮಂಗಳೂರಿಗೆ ಬರಲಿದ್ದಾರೆ. ಅವರ ಭೇಟಿಯಿಂದ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಸಲಿದೆ. ಪ್ರಧಾನಿ ಭೇಟಿಗೆ ಅಂತಿಮ ಹಂತದ ಸಿದ್ಧತೆಗಳು ಭರದಿಂದ ನಡೆಯುತ್ತಿವೆ ಎಂದು ಸಂಸದ ನಳಿನ್‌ಕುಮಾರ್ ಕಟೀಲು ಹೇಳಿದರು.

ಜಿಲ್ಲೆಯ ಕೆಲ ಕ್ಷೇತ್ರಗಳಲ್ಲಿ ಬಂಡಾಯದ ಭೀತಿಯನ್ನು ಎದುರಿಸುತ್ತಿರುವ ಬಿಜೆಪಿ ಮುಖಂಡರು, ಪ್ರಧಾನಿ ಮೋದಿ ಅವರ ಮೂಲಕ ಬಂಡಾಯ ನಿವಾರಿಸುವ ತಯಾರಿ ನಡೆಸಿದ್ದಾರೆ. ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಜಿಲ್ಲೆಯ ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎನ್ನುವ ವಿಶ್ವಾಸವನ್ನು ಬಿಜೆಪಿ ನಾಯಕರು ವ್ಯಕ್ತಪಡಿಸುತ್ತಿದ್ದಾರೆ.

ವಾಹನ ನಿಲುಗಡೆ ನಿಷೇಧ: 5 ರಂದು ಬೆಳಿಗ್ಗೆ 8 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ನೆಹರೂ ಮೈದಾನದ ಸುತ್ತಲಿನ 500 ಮೀಟರ್‌ ವ್ಯಾಪ್ತಿಯಲ್ಲಿ ಅನಗತ್ಯ ವಾಹನಗಳ ನಿಲುಗಡೆಯನ್ನು ನಿಷೇಧಿಸಿ, ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ಹಾಗೂ ನಗರದ ಪ್ರವಾಸಿ ಮಂದಿರದ ಸುತ್ತಲೂ ಅನಗತ್ಯವಾಗಿ ವಾಹನ ನಿಲುಗಡೆ ಮಾಡದಂತೆ ಆದೇಶದಲ್ಲಿ ತಿಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry