ಬುಧವಾರ, ಮಾರ್ಚ್ 3, 2021
21 °C

ಮತದಾರರಲ್ಲಿ ಜಾಗೃತಿ ಮೂಡಿಸಲು ರಂಗೋಲಿ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮತದಾರರಲ್ಲಿ ಜಾಗೃತಿ ಮೂಡಿಸಲು ರಂಗೋಲಿ ಸ್ಪರ್ಧೆ

ತೀರ್ಥಹಳ್ಳಿ: ಮತ ಚಲಾಯಿಸುವ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಗುರುವಾರ ತಾಲ್ಲೂಕು ಕಚೇರಿ ಆವರಣದಲ್ಲಿ ರಂಗೋಲಿ ಸ್ಪರ್ಧೆ ನಡೆಯಿತು.

ರಂಗೋಲಿ ಸ್ಪರ್ಧೆಯಲ್ಲಿ 100ಕ್ಕೂ ಹೆಚ್ಚು ಮಹಿಳಾ ಸ್ಪರ್ಧಿಗಳು ಪಾಲ್ಗೊಂಡಿದ್ದರು. ‘ನಮ್ಮ ಮತ ನಮ್ಮ ಹಕ್ಕು’, ‘ಮತದಾನದಲ್ಲಿ ಪಾಲ್ಗೊಳ್ಳಿ’ ಎಂಬ ಘೋಷ ವಾಕ್ಯವನ್ನು ರಂಗೋಲಿ ಚಿತ್ರದ ಬಳಿಯಲ್ಲಿ ಬರೆಯುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ನಡೆಸಲಾಯಿತು.

ತಾಲ್ಲೂಕು ಕಚೇರಿ ಆವರಣದ ತುಂಬ ಮಹಿಳೆಯರು ತುಂಬಿಕೊಂಡಿದ್ದು ವಿವಿಧ ಬಗೆಯ ಬಣ್ಣಗಳಿಂದ ಆಕರ್ಷಕ ರಂಗೋಲಿಗಳನ್ನು ಬಿಡಿಸಿದ್ದರು. ಮಹಿಳೆಯರು ರಂಗೋಲಿ ಬಿಡಿಸುವುದನ್ನು ಕುತೂಹಲದಿಂದ ನೋಡಲು ಜನ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು.

ತಾಲ್ಲೂಕು ಕಚೇರಿಗೆ ಬಂದ ಸಾರ್ವಜನಿಕರು ರಂಗೋಲಿ ಚಿತ್ರಗಳನ್ನು ವೀಕ್ಷಿಸುತ್ತ, ಚಿತ್ರದ ಸುತ್ತಲೂ ಬರೆದ ಮತದಾನದ ಮಹತ್ವ ತಿಳಿಸುವ ಘೋಷಣೆಗಳನ್ನು ಅರಿಯುವ ಪ್ರಯತ್ನ ನಡೆಸಿದರು.

ಸುಂದರವಾಗಿ ರಂಗೋಲಿ ಬಿಡಿಸಿದ ಮಹಿಳೆಯರಿಗೆ ತಾಲ್ಲೂಕು ಆಡಳಿತ ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿತು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.