4

ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಸಮರ್ಪಕ ಪರಿಹಾರ ನೀಡದ ರಾಜ್ಯ ಕಾಂಗ್ರೆಸ್‌ ಸರ್ಕಾರ: ಯೋಗಿ ಆದಿತ್ಯನಾಥ

Published:
Updated:
ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಸಮರ್ಪಕ ಪರಿಹಾರ ನೀಡದ ರಾಜ್ಯ ಕಾಂಗ್ರೆಸ್‌ ಸರ್ಕಾರ: ಯೋಗಿ ಆದಿತ್ಯನಾಥ

ಬಾಗಲಕೋಟೆ: ಕರ್ನಾಟಕದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಇಲ್ಲಿನ ಸರ್ಕಾರ ಇನ್ನೂ ಸಮರ್ಪಕವಾಗಿ ಪರಿಹಾರ ನೀಡಿಲ್ಲ. ಆದರೆ ಉತ್ತರಪ್ರದೇಶದಲ್ಲಿ ಮೊನ್ನೆ ಪ್ರಕೃತಿ ವಿಕೋಪಕ್ಕೆ ಸಿಲುಕಿ ಸಾವಿಗೀಡಾದವರಿಗೆ ಪರಿಹಾರ ನೀಡಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.

ಮುಧೋಳ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಶುಕ್ರವಾರ ರೋಡ್ ಶೋ ನಡೆಸಿ ಅವರು ಮಾತನಾಡಿದರು.

ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 86 ಲಕ್ಷ ರೈತರ ಸಾಲ ಮನ್ನಾ ಮಾಡಿದ್ದೇವೆ ಅಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳೋದಿಲ್ಲ ಎಂದರು.

ಯುವಕರಿಗೆ ಕೆಲಸ ನೀಡಿದ್ದೇವೆ. ಆದರೆ, ಸಿದ್ದರಾಮಯ್ಯ ರಾಜ್ಯದಲ್ಲಿ ಏನು ಮಾಡಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಭಾರತೀಯ ಜನತಾ ಪಕ್ಷದ ಅರ್ಥ ಭದ್ರತೆ, ಅಭಿವೃದ್ಧಿ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry