ಬೆಳಗಾವಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ದೆವ್ವ, ಬಿಕನಾಸಿ’ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಏಕವಚನದಲ್ಲಿ ಹರಿಹಾಯ್ದರು.

ಕಿತ್ತೂರು ವಿಧಾನಸಭಾ ಕ್ಷೇತ್ರದ ಸಂಪಗಾಂವದಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ನಡೆಸಿದ ಅವರು, ‘ದೆವ್ವ ಹೊಕ್ಕಿರುವ ಮನೆಯಲ್ಲಿ ಯಾರೂ ಇರುವುದಿಲ್ಲ. ಕಾಂಗ್ರೆಸ್ಸಿನ ದೊಡ್ಡ ದೊಡ್ಡ ನಾಯಕರೆಲ್ಲ ಮನೆ ಖಾಲಿ ಮಾಡಿ ಬಿಜೆಪಿ ಕಡೆ ಬರುತ್ತಿದ್ದಾರೆ’ ಎಂದು ಹೇಳಿದರು.

‘ಕರ್ನಾಟಕದಲ್ಲಿ ರಾವಣ ರಾಜ್ಯ ಇರುವ ಕಾರಣ ಮೋದಿಯವರು ಜಾರಿಗೆ ತಂದಿರುವ ಯೋಜನೆಗಳು ಹಳ್ಳಿಗಳಿಗೆ ತಲುಪಿಲ್ಲ’ ಎಂದು ಸಿದ್ದರಾಮಯ್ಯ ಅವರನ್ನು ರಾವಣನಿಗೆ ಹೋಲಿಸಿದರು.

‘ನೀವೇನಾದರೂ (ಜನರತ್ತ ಕೈ ಮಾಡಿ) ಕಾಂಗ್ರೆಸ್ನವರನ್ನು ಹೊಡೆದರೆ ನಿಮ್ಮ ಕೈ ಕೊಳೆಯಾಗುತ್ತೆ. ಅವರನ್ನು ಹೀನಾಯವಾಗಿ ಸೋಲಿಸುವ ಮೂಲಕ ಅವರೇ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಬೇಕು. ಕಾಂಗ್ರೆಸ್ಸಿಗರಿಗೆ ನೈತಿಕತೆ ಇದ್ದರೆ, ದೇಶದ ಬಗ್ಗೆ ಕಳಕಳಿ ಇದ್ದರೆ ಇನ್ನು ಮುಂದೆ ಸುಳ್ಳು ಹೇಳುವುದಿಲ್ಲವೆಂದು ಮುಖಕ್ಕೆ ಮಸಿ ಬಳಿದುಕೊಳ್ಳಬೇಕು’ ಎಂದರು.

‘ಸಿದ್ದರಾಮಯ್ಯ ದೇವಸ್ಥಾನ, ಮಠದ ಆದಾಯದ ಮೇಲೆ ಕಣ್ಣು ಹಾಕಿದ್ದಾನೆ. ಧಮ್ ಇದ್ದರೆ ಮಸೀದಿ, ಚರ್ಚ್ ದುಡ್ಡು ತೆಗೆದುಕೊಳ್ಳಲಿ’ ಎಂದು ಸವಾಲು ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.