ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕಿಟ್‌

Last Updated 4 ಮೇ 2018, 21:10 IST
ಅಕ್ಷರ ಗಾತ್ರ

ಇಳಕಲ್ (ಬಾಗಲಕೋಟೆ ಜಿಲ್ಲೆ): ನಗರದ ಡಾ.ಪವನ್ ಧರಕ್ ಚಿಕ್ಕಮಕ್ಕಳ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಶಾರ್ಟ್ ಸರ್ಕಿಟ್‌ನಿಂದಾಗಿ ವಿದ್ಯುತ್ ಅವಘಡ ಸಂಭವಿಸಿದೆ.

ಈ ವೇಳೆ ಆಸ್ಪತ್ರೆಯಲ್ಲಿ 30ಕ್ಕೂ ಹೆಚ್ಚು ಮಕ್ಕಳು ಇದ್ದರು. ಯಾವುದೇ ಅನಾಹುತವಾಗಿಲ್ಲ. ಆದರೆ, ಆಸ್ಪತ್ರೆಯ ವಿದ್ಯುತ್ ಸಂಪರ್ಕದ ವೈರಿಂಗ್ ವ್ಯವಸ್ಥೆ ಸಂಪೂರ್ಣ ಸುಟ್ಟು ಹೋಗಿದೆ.

ಚಿಕಿತ್ಸೆಗೆ ದಾಖಲಾಗಿದ್ದ ಮಕ್ಕಳನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

‘ಸಂಜೆ ವೇಳೆ ಏಕಾಏಕಿ ವೈರ್, ವಿದ್ಯುತ್ ಬೋರ್ಡ್‌ಗಳು, ಸ್ವಿಚ್‌ಗಳು ಬೆಂಕಿ ಹೊತ್ತಿಕೊಂಡು ಉರಿದು ಹೋದವು. ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿದಂತೆ ಶಬ್ದ ಕೇಳಿಸಿತು. ಇದರಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಕ್ಕಳು ಹಾಗೂ ಪೋಷಕರು ಹೆದರಿ ಕಿರುಚಿ ಹೊರಗೆ ಓಡಿ ಬಂದರು’ ಎಂದು ಪ್ರತ್ಯಕ್ಷದರ್ಶಿ ತಿಳಿಸಿದರು.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT