ಗುರುವಾರ , ಫೆಬ್ರವರಿ 25, 2021
29 °C

ಅಕ್ರಮದ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಕ್ರಮದ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಸ್ಮಾರ್ಟ್‌ ಸಿಟಿ ಯೋಜನೆಗೆ ಬಿಡುಗಡೆಯಾದ ಅನುದಾನವನ್ನು ದುರುಪಯೋಗಪಡಿಸಿಕೊಂಡಿದ್ದಲ್ಲಿ ದಾಖಲೆ ಬಿಡುಗಡೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.

ಮೋದಿ ಆರೋಪಕ್ಕೆ ಟ್ವಿಟರ್‌ನಲ್ಲಿ ತಿರುಗೇಟು ನೀಡಿರುವ ಸಿದ್ದರಾಮಯ್ಯ, ‘ಅಭಿವೃದ್ಧಿ ಕಾರ್ಯ ನಡೆಸುವ ಬದಲು ರಾಜ್ಯ ಸರ್ಕಾರ ಹಣ ಲೂಟಿ ಮಾಡುತ್ತಿದೆ ಎಂದು ಮೋದಿ ಆರೋಪಿಸಿದ್ದಾರೆ. ಇದಕ್ಕೆ ಆಧಾರವೇನು? ಪ್ರಧಾನಿಯವರ ಇಂಥ ಹೇಳಿಕೆಗಳನ್ನು ಯಾರಾದರೂ ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿದೆಯೇ’ ಎಂದು ಪ್ರಶ್ನಿಸಿದ್ದಾರೆ.

ತುಮಕೂರಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಮೋದಿ, ‘ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ತುಮಕೂರು ಸಹ ಸೇರಿದೆ. ಕರ್ನಾಟಕದ ಸ್ಮಾರ್ಟ್ ಸಿಟಿ ಯೋಜನೆಗಾಗಿ ಕೇಂದ್ರ ಸರ್ಕಾರ ₹14,000 ಕೋಟಿ ಬಿಡುಗಡೆ ಮಾಡಿದೆ. ಇಲ್ಲಿನ ಸರ್ಕಾರ ಬಿಡುಗಡೆಯಾದ ಅನುದಾನವನ್ನು ಬಳಸದೆ ಮಂತ್ರಿಗಳ ತಿಜೋರಿ ತುಂಬಿಸುವುದರಲ್ಲಿ ನಿರತವಾಗಿದೆ’ ಎಂದು ಆರೋಪಿಸಿದ್ದರು.

ಇನ್ನಷ್ಟು...

ಕಾಂಗ್ರೆಸ್‌ ಎತ್ತಿನಹೊಳೆ ಯೋಜನೆ ಯಾಕೆ ಪೂರ್ಣಗೊಳಿಸಿಲ್ಲ : ನರೇಂದ್ರ ಮೋದಿ ಪ್ರಶ್ನೆ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.