ಶುಕ್ರವಾರ, ಫೆಬ್ರವರಿ 26, 2021
22 °C

ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದ ಸಿಎಸ್‌ಕೆ: ಬೌಲಿಂಗ್‌ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದ ಸಿಎಸ್‌ಕೆ: ಬೌಲಿಂಗ್‌ ಆಯ್ಕೆ

ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಕ್ರಿಕೆಟ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌(ಸಿಎಸ್‌ಕೆ) ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದಿರುವ ಸಿಎಸ್‌ಕೆ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಮೇ.1ರಂದು ಕೋಲ್ಕತ್ತ ನೈಟ್ ರೈಡರ್ಸ್‌ ತಂಡದ ವಿರುದ್ಧ ಪಂದ್ಯ ಗೆದ್ದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಮುಂದಿನ ಹಾದಿ ಬಹಳ ಕಠಿಣವಾಗಿದೆ. ಪ್ಲೇ ಆಫ್ ಹಂತಕ್ಕೆ ಪ್ರವೇಶಿಸಲು ಇನ್ನುಳಿದಿರುವ ಆರು ಪಂದ್ಯಗಳಲ್ಲಿ ಐದರಲ್ಲಿ ಗೆಲ್ಲುವ ಒತ್ತಡದಲ್ಲಿದೆ.

ಏಪ್ರಿಲ್ 25ರಂದು ಬೆಂಗಳೂರಿನಲ್ಲಿ ನಡೆದಿದ್ದ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ದೋನಿ ಬಳಗವು ಸೋಲಿಸಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್‌ಸಿಬಿ ತಂಡವು ಎಬಿ ಡಿವಿಲಿಯರ್ಸ್‌ ಮತ್ತು ಕ್ವಿಂಟನ್ ಡಿ ಕಾಕ್ ಅವರ ಅಬ್ಬರದ ಅರ್ಧಶತಕಗಳ ಬಲದಿಂದ 205 ರನ್‌ ಗಳಿಸಿತ್ತು.

ಗುರಿ ಬೆನ್ನತ್ತಿದ ಸಿಎಸ್‌ಕೆಯ ನಾಯಕ ದೋನಿ (ಅಜೇಯ 70) ಮತ್ತು ಅಂಬಟಿ ರಾಯುಡು (82 ರನ್) ಅವರ ಅಮೋಘ ಆಟದ ಬಲದಿಂದ 5 ವಿಕೆಟ್‌ಗಳಿಂದ ಜಯಿಸಿತ್ತು. ಅದರ ನಂತರ ಸಿಎಸ್‌ಕೆ ತಂಡವು ಮೂರು ಪಂದ್ಯಗಳಲ್ಲಿ ಆಡಿತ್ತು. ಅದರಲ್ಲಿ ಎರಡರಲ್ಲಿ ಸೋತಿದೆ. ಆದರೂ ಅಂಕಗಳಿಕೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆರ್‌ಸಿಬಿ ಎರಡು ಪಂದ್ಯಗಳಲ್ಲಿ ಆಡಿ ಒಂದರಲ್ಲಿ ಗೆದ್ದಿತ್ತು.

*

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.