ಭಾನುವಾರ, ಮಾರ್ಚ್ 7, 2021
22 °C

ಹೊಳಲ್ಕೆರೆ ಕ್ಷೇತ್ರದ ಇಸಾಮುದ್ರದಲ್ಲಿ ಪ್ರಚಾರ ವೇಳೆ ಸಚಿವ ಎಚ್. ಆಂಜನೇಯ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಳಲ್ಕೆರೆ ಕ್ಷೇತ್ರದ ಇಸಾಮುದ್ರದಲ್ಲಿ ಪ್ರಚಾರ ವೇಳೆ ಸಚಿವ ಎಚ್. ಆಂಜನೇಯ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಹೊಳಲ್ಕೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಆಂಜನೇಯ ಅವರು ಪ್ರಚಾರದ ವೇಳೆ ಶನಿವಾರ ಅಸ್ವಸ್ಥಗೊಂಡಿದ್ದಾರೆ.

ಕ್ಷೇತ್ರ ವ್ಯಾಪ್ತಿಯ ಇಸಾಮುದ್ರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಪ್ರಚಾರ ಮಾಡುವ ವೇಳೆ ಈ ಘಟನೆ ಸಂಭವಿಸಿದೆ.

ಬಿರು ಬಿಸಿಲಿನಲ್ಲಿ ತೆರೆದ ವಾಹನದಲ್ಲಿ ಪ್ರಚಾರಕ್ಕೆ ತೆರಳಿದಾಗ ತಲೆಸುತ್ತು ಹಾಗೂ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರಿಗೆ ವೈದ್ಯ ಡಾ.ಸತೀಶ್ ಚಿಕಿತ್ಸೆ ನೀಡಿದ್ದಾರೆ. ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್‌ಎಸ್ ಆಸ್ಪತ್ರೆಯಲ್ಲಿನ ನಾರಾಯಣ ಹೃದಯಲಯಕ್ಕೆ ದಾಖಲಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.