ಸೋಮವಾರ, ಮಾರ್ಚ್ 1, 2021
24 °C

ವಿಮಾನ ನಿಲ್ದಾಣಕ್ಕೆ ಸಜೀವ ಗುಂಡು ಕೊಂಡೊಯ್ದ ಒಬ್ಬನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಮಾನ ನಿಲ್ದಾಣಕ್ಕೆ ಸಜೀವ ಗುಂಡು ಕೊಂಡೊಯ್ದ ಒಬ್ಬನ ಬಂಧನ

ಮಂಗಳೂರು: 15 ಸಜೀವ ಗುಂಡುಗಳೊಂದಿಗೆ ವಿಮಾನ ಏರಲು ಹೊರಟಿದ್ದ ಒಬ್ಬನನ್ನು ಇಲ್ಲಿನ ಬಜ್ಪೆಯಲ್ಲಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಪೊಲೀಸರು ಶನಿವಾರ ಮಧ್ಯಾಹ್ನ ಬಂಧಿಸಿದ್ದಾರೆ‌.

ಬೆಳ್ತಂಗಡಿ ನಿವಾಸಿ ಪಿ.ಇಸ್ಮಾಯಿಲ್ ಬಂಧಿತ ವ್ಯಕ್ತಿ. ಈತ ಇಂಡಿಗೋ ಏರ್ ಲೈನ್ಸ್ ವಿಮಾನದಲ್ಲಿ ಮಂಗಳೂರಿನಿಂದ ನಾಗಪುರಕ್ಕೆ ಹೊರಟಿದ್ದ ಎಂದು ಸಿಐಎಸ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ದೇಶೀಯ ಪ್ರಯಾಣಿಕರ ತಪಾಸಣಾ ಪ್ರದೇಶದಲ್ಲಿ ಸಬ್ ಇನ್ ಸ್ಪೆಕ್ಟರ್ ಸೌರಬ್ ಕುಮಾರ್ ನೇತೃತ್ವದ ತಂಡ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿತ್ತು. ಆಗ ಇಸ್ಮಾಯಿಲ್ ಬಳಿ ಇದ್ದ ಚೀಲದಲ್ಲಿ 0.32 ಪಿಸ್ತೂಲ್ ನಲ್ಲಿ ಬಳಸುವ 15 ಸಜೀವ ಗುಂಡುಗಳಿದ್ದವು. ವಿಚಾರಣೆ ವೇಳೆ ಆತ ಸರಿಯಾದ ದಾಖಲೆ‌ ಹಾಜರುಪಡಿಸಿಲ್ಲ. ಆತನನ್ನು ಬಂಧಿಸಿ, ಗುಂಡುಗಳ ಸಮೇತ ಮುಂದಿನ ಕ್ರಮಕ್ಕಾಗಿ ಸ್ಥಳೀಯ ಪೊಲೀಸರ ವಶಕ್ಕೆ ನೀಡಲಾಗಿದೆ  ಎಂದು ಸಿಐಎಸ್ಎಫ್ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.