ಭಾನುವಾರ, ಮಾರ್ಚ್ 7, 2021
22 °C

ಶ್ರೀರಾಮುಲು ವಿರುದ್ಧ ಪ್ರಚಾರ ಮಾಡಲ್ಲ: ಸುದೀಪ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಾಮುಲು ವಿರುದ್ಧ ಪ್ರಚಾರ ಮಾಡಲ್ಲ: ಸುದೀಪ್

ಸುರಪುರ (ಯಾದಗಿರಿ ಜಿಲ್ಲೆ): ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ವಿರುದ್ಧ ಪ್ರಚಾರ ಮಾಡುವುದಿಲ್ಲ ಎಂದು ನಟ ಸುದೀಪ್‌ ಶನಿವಾರ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶ್ರೀರಾಮುಲು ನನ್ನ ಸಹೋದರ. ಅವರ ವಿರುದ್ಧ ಪ್ರಚಾರಕ್ಕೆ ಹೋಗುವುದಿಲ್ಲ’ ಎಂದು ತಿಳಿಸಿದರು.

‘ನಾನು ಬಾದಾಮಿ ಕ್ಷೇತ್ರಕ್ಕೆ ಹೋಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಪ್ರಚಾರ ಮಾಡುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಹೀಗಾಗಿ, ಹೋಗುವ ಪ್ರಶ್ನೇಯೇ ಇಲ್ಲ’ ಎಂದು ಹೇಳಿದರು.

‘ಸುರಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ರಾಜೂಗೌಡ ಆತ್ಮೀಯ ಗೆಳೆಯ. ಹೀಗಾಗಿ ಅವರಿಗೆ ಬೆಂಬಲ ಸೂಚಿಸಲು ಬಂದಿದ್ದೇನೆ. ಈ ಹಿಂದೆ ಅವರು ಎರಡು ಬಾರಿ ಗೆದ್ದು ಕ್ಷೇತ್ರದಲ್ಲಿ ಜನಪರ ಕೆಲಸ ಮಾಡಿದ್ದಾರೆ' ಎಂದರು.

‘ನನಗೆ ರಾಜಕೀಯ ಇಷ್ಟವಿಲ್ಲ. ನಾನೊಬ್ಬ ಕಲಾವಿದ. ಆತ್ಮೀಯರ ಪರ ಮಾತ್ರ ಪ್ರಚಾರಕ್ಕೆ ಹೋಗುತ್ತಿದ್ದೇನೆ. ಆ ಪಕ್ಷ, ಈ ಪಕ್ಷ ಎನ್ನುವುದಿಲ್ಲ’ ಎಂದು ತಮ್ಮ ನಿಲುವನ್ನು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.