ಶನಿವಾರ, ಮಾರ್ಚ್ 6, 2021
21 °C

ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ; ಲಾಠಿ ಪ್ರಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ; ಲಾಠಿ ಪ್ರಹಾರ

ಕೆರೂರ (ಬಾಗಲಕೋಟೆ ಜಿಲ್ಲೆ): ಪಟ್ಟಣದಲ್ಲಿ ಶನಿವಾರ ರಾತ್ರಿ ನಿಗದಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರೋಡ್‌ ಷೋ ಹಾಗೂ ಸಾರ್ವಜನಿಕ ಸಭೆಗೂ ಮುನ್ನ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ಈ ವೇಳೆ ಬಸ್‌ ನಿಲ್ದಾಣದ ಎದುರಿನ ಬಿಜೆಪಿ ಕಚೇರಿಗೆ ಕೆಲವರು ಕಲ್ಲು ತೋರಿದ್ದು, ಕಿಟಕಿ ಗಾಜು ಒಡೆದಿದೆ. ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಮುಖ್ಯಮಂತ್ರಿ ಬರುವ ಮುನ್ನ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗಲಾಟೆಯಿಂದ ಭೀತಿಗೊಂಡ ವ್ಯಾಪಾರಸ್ಥರು ಅಂಗಡಿಗಳನ್ನು ಬಂದ್ ಮಾಡಿ ತೆರಳಿದರು. ಪಟ್ಟಣದಲ್ಲಿ ಬಿಗುವಿನ ವಾತಾವರಣ ಇದ್ದು, ಬಂದೋಬಸ್ತ್‌ಗಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ಮತ್ತು ಅರೆಸೇನಾ ಪಡೆ ಸಿಬ್ಬಂದಿ ನಿಯೋಜಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.