ಕಾಲುವೆಗೆ ಉರುಳಿದ ಬೆಂಗಾವಲು ಪಡೆ ವಾಹನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಉಪ ಮುಖ್ಯಮಂತ್ರಿ ಕವಿಂದರ್ ಗುಪ್ತಾ ಅವರ ಬೆಂಗಾವಲು ಪಡೆ ವಾಹನ ಶನಿವಾರ ಕಾಲುವೆಗೆ ಉರುಳಿದೆ.
ಗುಪ್ತಾ ಸಮಾರಂಭವೊಂದರಲ್ಲಿ ಪಾಲ್ಗೊಂಡು ಜಮ್ಮುವಿಗೆ ಹಿಂದಿರುಗುತ್ತಿದ್ದ ವೇಳೆ ನಗರದ ಹೊರವಲಯದಲ್ಲಿ ಈ ಅಪಘಾತ ನಡೆದಿದೆ.
ಅಪಘಾತದಲ್ಲಿ ರಾಜ್ಯ ವಾರ್ತಾ ಮತ್ತು ಪ್ರಚಾರ ಇಲಾಖೆಯ ಛಾಯಾಗ್ರಾಹಕ ಮೃತಪಟ್ಟಿದ್ದಾರೆ. ವಾಹನ ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ.
ಅತಿ ವೇಗವಾಗಿ ಓಡುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದೆ ಎಂದು ಹೇಳಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.