ಜಾರ್ಖಂಡ್ ಯುವತಿ ದಹನ: 15 ಮಂದಿ ಬಂಧನ

ಛಾತ್ರಾ(ಜಾರ್ಖಂಡ್): ಇಲ್ಲಿನ ಪರಸೌನಿ ಗ್ರಾಮದಲ್ಲಿ ಶುಕ್ರವಾರ 18 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಜೀವಂತವಾಗಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಆರೋಪಿಗಳನ್ನು ಬಂಧಿಸಲಾಗಿದೆ.
ಆದರೆ, ಪ್ರಮುಖ ಆರೋಪಿ ಧನು ಭುಯಿಯಾ ಇನ್ನೂ ಸೆರೆ ಸಿಕ್ಕಿಲ್ಲ. ಆರೋಪಿ ಹಾಗೂ ಆತನ ಐವರು ಸಹಚರರಿಗಾಗಿ ಶೋಧ ನಡೆಸಲಾಗುತ್ತಿದೆ. ಶೀಘ್ರವೇ ಎಲ್ಲರನ್ನೂ ಬಂಧಿಸಲಾಗುತ್ತದೆ ಎಂದು ಛಾತ್ರಾ ಪೊಲೀಸ್ ಆಯುಕ್ತ ಜಿತೇಂದ್ರಕುಮಾರ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಾರ್ಖಂಡ್ ಮುಖ್ಯಮಂತ್ರಿ ರಘುವರ್ ದಾಸ್ ಅವರು ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಕಿ ಹಚ್ಚಿದ್ದೇಕೆ?: ಯುವತಿ ಮೇಲೆ ಅತ್ಯಾಚಾರ ಎಸಗಿದ ಧನು ಭುಯಿಯಾ ಹಾಗೂ ಇತರ ಆರೋಪಿಗಳಿಗೆ ಗ್ರಾಮದ ಪಂಚಾಯ್ತಿ ಮುಖಂಡರು 100 ಬಸ್ಕಿ ಹೊಡೆಯುವಂತೆ ಆದೇಶಿಸಿದ್ದರು. ಪಂಚಾಯ್ತಿ ಆದೇಶ ಪಾಲಿಸದ ಆರೋಪಿ ಯುವತಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದ. ಆಗ ಯುವತಿ ಮೃತಪಟ್ಟಿದ್ದಳು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.