ಶಿಕ್ಷಕರ ವರ್ಗಾವಣೆಗೆ ಮುಹೂರ್ತ ನಿಗದಿ

7

ಶಿಕ್ಷಕರ ವರ್ಗಾವಣೆಗೆ ಮುಹೂರ್ತ ನಿಗದಿ

Published:
Updated:
ಶಿಕ್ಷಕರ ವರ್ಗಾವಣೆಗೆ ಮುಹೂರ್ತ ನಿಗದಿ

ಬೆಂಗಳೂರು: ವಿವಿಧ ಕಾರಣಗಳಿಂದ ವಿಳಂಬವಾಗಿದ್ದ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್‌ ಅನ್ನು 16ರಿಂದ ನಡೆಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸೂಚಿಸಿದೆ.

ಚುನಾವಣೆ ಮುಗಿದ ಕೂಡಲೇ ರಾಜ್ಯದ ಎಲ್ಲಾ ಶಿಕ್ಷಕರನ್ನು ಕೌನ್ಸಲಿಂಗ್‌ ಮೂಲಕ ವರ್ಗಾವಣೆ ಮಾಡಲು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು. ಎಲ್ಲಾ ಪ್ರಕ್ರಿಯೆಗಳನ್ನು ಜೂನ್‌ 1ರೊಳಗೆ ಪೂರ್ಣಗೊಳಿಸಬೇಕು ಎಂದು ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ ಆದೇಶದಲ್ಲಿ ತಿಳಿಸಿದ್ದಾರೆ.

ಉಪನಿರ್ದೇಶಕರ ಕಚೇರಿಯಲ್ಲಿ ನಡೆಯುತ್ತಿದ್ದ ಕೌನ್ಸೆಲಿಂಗ್‌ ಈ ವರ್ಷ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ (ಬಿಇಒ) ಕಚೇರಿಯಲ್ಲಿ ನಡೆಸಬೇಕು. ಖಾಲಿಯಿರುವ ಹುದ್ದೆಗಳ ಪಟ್ಟಿಯನ್ನು ಬಿಇಒ ಕಚೇರಿಯ ಕಂಪ್ಯೂಟರ್‌ನಲ್ಲೇ ತೋರಿಸಿ, ಅಲ್ಲಿಯೇ ಹುದ್ದೆಯ ಸ್ಥಳ ಆಯ್ಕೆ ಮಾಡಲು ಅವಕಾಶ ಕಲ್ಪಿಸಬೇಕು. ನಂತರ ಉಪನಿರ್ದೇಶಕರು ಆದ್ಯತೆ ಮೇರೆಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಬೇಕು ಎಂದು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry