ಚುನಾವಣಾ ಸಿಬ್ಬಂದಿಗೆ ಅಂಚೆ ಮತದಾನಕ್ಕೆ ವ್ಯವಸ್ಥೆ

7

ಚುನಾವಣಾ ಸಿಬ್ಬಂದಿಗೆ ಅಂಚೆ ಮತದಾನಕ್ಕೆ ವ್ಯವಸ್ಥೆ

Published:
Updated:

ಚಾಮರಾಜನಗರ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅಂಚೆ ಮತಪತ್ರ ಸೌಲಭ್ಯ ಕೇಂದ್ರವನ್ನು ಮೇ 8ರಂದು ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಹಾಗೂ ಮೇ 7ರಂದು ಕೊಳ್ಳೇಗಾಲದ ದಕ್ಷಿಣ ಬಡಾವಣೆಯಲ್ಲಿರುವ ವಾಸವಿ ವಿದ್ಯಾಕೇಂದ್ರ, ಚಾಮರಾಜನಗರ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ತೆರೆಯಲಾಗುತ್ತದೆ.

ಪೊಲೀಸ್ ಇಲಾಖೆ, ಗೃಹ ರಕ್ಷಕ ದಳ, ಕೆ.ಎಸ್.ಆರ್.ಟಿ.ಸಿ.,ಅಗ್ನಿಶಾಮಕ ಠಾಣೆ ಇತರೆ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಯಾವುದೇ ಅಧಿಕಾರಿ, ಸಿಬ್ಬಂದಿ ಇದರ ಉಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಬಿ.ಬಿ.ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‌

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry