ಸಿದ್ದಗಂಗಾ ಮಠಕ್ಕೆ ನಿತೀಶ್‌ ಕುಮಾರ್

7
ಸ್ವಾಮೀಜಿ ದರ್ಶನ ಪಡೆದ ಬಿಹಾರ ಮುಖ್ಯಮಂತ್ರಿ

ಸಿದ್ದಗಂಗಾ ಮಠಕ್ಕೆ ನಿತೀಶ್‌ ಕುಮಾರ್

Published:
Updated:
ಸಿದ್ದಗಂಗಾ ಮಠಕ್ಕೆ ನಿತೀಶ್‌ ಕುಮಾರ್

ತುಮಕೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯುನಿಂದ ಉತ್ತಮ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದರು.

ಭಾನುವಾರ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಅವರು ಮಾತನಾಡಿದರು.

ಜೆ.ಎಚ್. ಪಟೇಲ್ ಅವರ ಪುತ್ರ ಮಹಿಮಾ ಪಟೇಲ್ ನೇತೃತ್ವದಲ್ಲಿ ಪಕ್ಷವು ರಾಜ್ಯದ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಗೆಲುವು ಸಾಧಿಸಲು ಅಭ್ಯರ್ಥಿಗಳು ಶ್ರಮಿಸುತ್ತಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮಹಿಮ ಪಟೇಲ್ ಪರ ಪ್ರಚಾರ ನಡೆಸುತ್ತೇನೆ ಎಂದರು ತಿಳಿಸಿದರು.

ಸಿದ್ಧಗಂಗಾ ಮಠ ಪವಿತ್ರ ಕ್ಷೇತ್ರ. ಈ ಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮೀಜಿ ಅವರ ಆಶೀರ್ವಾದ ಪಡೆದಿರುವುದು ಸೌಭಾಗ್ಯ ಎಂದು ಭಾವಿಸಿದ್ದೇನೆ ಎಂದು ನುಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry