ಶುಕ್ರವಾರ, ಫೆಬ್ರವರಿ 26, 2021
31 °C

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಕೆಕೆಆರ್‌: ಮುಂಬೈ ಇಂಡಿಯನ್ಸ್ ಉತ್ತಮ ಆರಂಭ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಕೆಕೆಆರ್‌: ಮುಂಬೈ ಇಂಡಿಯನ್ಸ್ ಉತ್ತಮ ಆರಂಭ

ಮುಂಬೈ (ಪಿಟಿಐ): ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯವಾಳಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್‌) ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ.

ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ತಂಡದ ಎದುರು ಕೋಲ್ಕತ್ತ ನೈಟ್ ರೈಡರ್ಸ್ ಸೆಣಸುತ್ತಿದೆ. ಪ್ಲೇ ಆಫ್‌ ಹಂತಕ್ಕೇರುವ ಕನಸು ಜೀವಂತವಾಗಿರಬೇಕಾದರೆ ಮುಂಬೈ ಇಂಡಿಯನ್ಸ್ ತಂಡ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

ಕೆಕೆಆರ್‌ ಉತ್ತಮ ಆಟದ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು ನಿರಾಳವಾಗಿದೆ. ನಾಯಕ ದಿನೇಶ್ ಕಾರ್ತಿಕ್, ಕ್ರಿಸ್ ಲಿನ್, ಆ್ಯಂಡ್ರೆ ರಸೆಲ್‌ ಮತ್ತು ಸುನಿಲ್ ನಾರಾಯಣ್‌ ಅವರೊಂದಿಗೆ ಯುವ ಆಟಗಾರ ಶುಭಮನ್ ಗಿಲ್‌ ಬ್ಯಾಟಿಂಗ್‌ಗೆ ಶಕ್ತಿ ತುಂಬಿದ್ದಾರೆ. ಬೌಲಿಂಗ್‌ಗೆ ಬಲ ನೀಡಲು ಸುನಿಲ್ ನಾರಾಯಣ್‌, ಪೀಯೂಷ್ ಚಾವ್ಲಾ, ಕುಲದೀಪ್ ಯಾದವ್‌ ಅವರಿದ್ದಾರೆ.

ಇತ್ತೀಚಿನ ವರದಿ ಬಂದಾಗ ಮುಂಬೈ ಇಂಡಿಯನ್ಸ್ ಯಾವುದೇ ವಿಕೆಟ್ ನಷ್ಟವಿಲ್ಲದೆ 4 ಓವರ್‌ಗಳಲ್ಲಿ 32ರನ್‌ ಗಳಿಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.