ರೈತರ ಸಾಲ ಸಂಪೂರ್ಣ ಮನ್ನಾ: ರಾಜನಾಥ್ ಭರವಸೆ

7

ರೈತರ ಸಾಲ ಸಂಪೂರ್ಣ ಮನ್ನಾ: ರಾಜನಾಥ್ ಭರವಸೆ

Published:
Updated:
ರೈತರ ಸಾಲ ಸಂಪೂರ್ಣ ಮನ್ನಾ: ರಾಜನಾಥ್ ಭರವಸೆ

ಚಿತ್ತಾಪುರ: ‘ರಾಜ್ಯದಲ್ಲಿ ಮತ್ತೊಮ್ಮೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗದಂತೆ ತಡೆಯಲು ಸಿದ್ದರಾಮಯ್ಯ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅವರ ಪ್ರಯತ್ನ ಫಲಿಸುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಪಟ್ಟಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ವಾಲ್ಮೀಕ ನಾಯಕ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ₹ 10 ಸಾವಿರ ಸಾಲ ಮನ್ನಾ ಮಾಡಿದೆ. ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಹತ್ತು ದಿನಗಳಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ₹ 1 ಲಕ್ಷ ಸಾಲ ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿದರು.

ಅಭ್ಯರ್ಥಿ ವಾಲ್ಮೀಕ ನಾಯಕ,  ಮುಖಂಡರಾದ ಮಲ್ಲಿಕಾರ್ಜುನ ಎಮ್ಮೆನೋರ್, ರಘುನಾಥ ಮಲ್ಕಾಪುರೆ, ವಿಶ್ವನಾಥ ಪಾಟೀಲ್ ಹೆಬ್ಬಾಳ, ಪಾಟೀಲ್ ಅಲ್ಲೂರ , ಲಿಂಗಾರೆಡ್ಡಿ ಭಾಸರೆಡ್ಡಿ, ಶಿವಲಿಂಗಪ್ಪ ವಾಡೆದ್, ಅರವಿಂದ ಚವಾಣ್, ಬಿಜೆಪಿ ರಾಜ್ಯ ಮಹಿಳಾ ಮೊರ್ಚಾ ಉಪಾಧ್ಯಕ್ಷೆ ಶಶಿಕಲಾ ತೆಂಗಳಿ, ರವೀಂದ್ರ ಸಜ್ಜನಶೆಟ್ಟಿ, ತಮ್ಮಣ್ಣ ಡಿಗ್ಗಿ, ನೀಲಕಂಠರಾವ ಪಾಟೀಲ್, ಬಸವರಾಜ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry