ಬುಧವಾರ, ಮಾರ್ಚ್ 3, 2021
25 °C

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತೊಂದು ಬಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತೊಂದು ಬಾಣ

ಬೆಂಗಳೂರು: ‘ಚೆನ್ನೈ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿ ಎಂದು ಘೋಷಿಸಿರುವ ವ್ಯಕ್ತಿಯನ್ನು ಸಿದ್ದರಾಮಯ್ಯ ಚೀನಾದಲ್ಲಿ ಭೇಟಿಯಾಗಿದ್ದರು’ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತೊಂದು ಆರೋಪ ಮಾಡಿದೆ.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಪ್ರದರ್ಶಿಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ‘ಚೀನಾದಲ್ಲಿ 2013ರಲ್ಲಿ ನಡೆದ ಡಬ್ಲ್ಯೂಇಎಫ್‌ (ವಿಶ್ವ ಆರ್ಥಿಕ ಸಮಾವೇಶ) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಈ ಸಂದರ್ಭ ಅವರು ವಿಜಯ್‌ ಈಶ್ವರ್‌ ಎಂಬ ತಲೆಮರೆಸಿಕೊಂಡಿರುವ ಆರೋಪಿಯನ್ನು ಭೇಟಿಯಾಗಿದ್ದರು’ ಎಂದು ಆರೋಪಿಸಿದರು.

ಈ ಸಂದರ್ಭ ‘ಗಂಭೀರ ವಂಚನೆಗಳ ತನಿಖಾ ಸಂಸ್ಥೆಯು’ ಅಪಾಯಕಾರಿ ಎಂದು ಘೋಷಿಸಿರುವ ಮತ್ತೊಬ್ಬ ವ್ಯಕ್ತಿಯೂ ಇದ್ದರು’ ಎಂದು ಅವರು ದೂರಿದರು.

ವಿಜಯನ್ ಯಾರೋ ಗೊತ್ತಿಲ್ಲ: ಸಿಎಂ ಪ್ರತಿಕ್ರಿಯೆ

ಮೈಸೂರು: ‘ವಿಜಯ್‌ ಈಶ್ವರನ್‌ ಯಾರೆಂಬುದು ಗೊತ್ತಿಲ್ಲ. ಬಿಜೆಪಿ ಮುಖಂಡರ ಸುಳ್ಳು ಆರೋಪಗಳಿಗೆ ಉತ್ತರ ಕೊಡುವ ಅವಶ್ಯವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಭಾನುವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ನನ್ನ ವಿರುದ್ಧ ಮಾತನಾಡಲು ಅವರಿಗೆ ಯಾವುದೇ ವಿಷಯ ಇಲ್ಲ. ಹೀಗಾಗಿ, ವಾಚ್‌ ವಿಚಾರ ಹಿಡಿದುಕೊಂಡಿದ್ದಾರೆ’ ಎಂದರು.

‘ಪ್ರಧಾನಿ ನರೇಂದ್ರ ಮೋದಿ ಹಾಕಿಕೊಂಡಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ ವೇಸ್ಟ್‌ಕೋಟ್ ಕೊಟ್ಟಿದ್ದು ಯಾರು? ಅದಕ್ಕೆ ಅವರು ತೆರಿಗೆ ಕಟ್ಟಿದ್ದರೆ? ಜನರಿಂದ ಟೀಕೆ ವ್ಯಕ್ತವಾದ ಮೇಲೆ ಅದನ್ನು ಹರಾಜು ಹಾಕಿದರು. ಇದಕ್ಕೆ ಬಿಜೆಪಿಯವರು ಮೊದಲು ಉತ್ತರ ಕೊಡಲಿ’ ಎಂದು ತಿರುಗೇಟು ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.