ನಾಲ್ಕು ಮಂದಿ ವಿರುದ್ಧ ಪ್ರಕರಣ

7

ನಾಲ್ಕು ಮಂದಿ ವಿರುದ್ಧ ಪ್ರಕರಣ

Published:
Updated:
ನಾಲ್ಕು ಮಂದಿ ವಿರುದ್ಧ ಪ್ರಕರಣ

ಕೊರಟಗೆರೆ: ಜೆಡಿಎಸ್ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇಲ್ಲಿನ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಕೆ.ಚಿಕ್ಕಣ್ಣ ಅವರ ಮೇಲೆ ಕಾಂಗ್ರೆಸ್ ಮುಖಂಡರು ಹಲ್ಲೆ ನಡೆಸಿದ್ದು, ಈ ಸಂಬಂಧ ನಾಲ್ಕು ಜನರ ವಿರುದ್ಧ ಅವರು ಶನಿವಾರ ರಾತ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.

ರಾಜ್ಯ ತೆಂಗುನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜಿ.ವೆಂಕಟಾಚಲಯ್ಯ, ಚಿಕ್ಕರಂಗಯ್ಯ, ಭರತ್, ಹನುಮಯ್ಯ ಅವರ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿ, ಜಾತಿ ನಿಂದನೆ ಹಾಗೂ ಹಲ್ಲೆ ಪ್ರಕರಣದಡಿ ದೂರು ದಾಖಲಿಸಿದ್ದಾರೆ.

‘ಡಾ.ಜಿ.ಪರಮೇಶ್ವರ್ ಸೋಲಿಸಿ, ಕಾಂಗ್ರೆಸ್ ಬೆಂಬಲಿಸಿ’ ಎಂದು ಮೇ 4ರಂದು ಪಟ್ಟಣದಲ್ಲಿ ಸಾಹಿತಿ ಕೆ.ಬಿ.ಸಿದ್ದಯ್ಯ ಅವರು ಪ್ರಚಾರ ನಡೆಸಿದ್ದರು. ಈ ವೇಳೆ ಚಿಕ್ಕಣ್ಣ ಜೆಡಿಎಸ್ ಪರ ಕರಪತ್ರ ಹಂಚುತ್ತಿದ್ದರು ಎಂದು ಆರೋಪಿಸಿ ಅವರ ಮೇಲೆ ಹಲ್ಲೆ ನಡೆದಿತ್ತು. ಚಿಕ್ಕಣ್ಣ ತಾಲ್ಲೂಕು ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry