ತುಮಕೂರು: ‘ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಂಯುಕ್ತ ಜನತಾ ದಳದಿಂದ (ಜೆಡಿಯು) ಉತ್ತಮ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ’ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದರು.

ಭಾನುವಾರ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಜೆ.ಎಚ್.ಪಟೇಲ್ ಅವರ ಪುತ್ರ ಮಹಿಮ ಪಟೇಲ್ ಅವರ ನೇತೃತ್ವದಲ್ಲಿ ನಮ್ಮ ಪಕ್ಷ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಗೆಲುವಿಗಾಗಿ ನಮ್ಮ ಅಭ್ಯರ್ಥಿಗಳು ಉತ್ತಮ ರೀತಿಯಲ್ಲಿ ಶ್ರಮ ಪಡುತ್ತಿದ್ದಾರೆ’ ಎಂದರು.

‘ಸಿದ್ಧಗಂಗಾಮಠ ಪವಿತ್ರ ಕ್ಷೇತ್ರ. ಈ ಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮೀಜಿ ಅವರ ಆಶೀರ್ವಾದ ಪಡೆದಿರುವುದು ನನ್ನ ಸೌಭಾಗ್ಯ ಎಂದು ಭಾವಿಸಿದ್ದೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.