ರಾಜ್ಯ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಾದ

7

ರಾಜ್ಯ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಾದ

Published:
Updated:
ರಾಜ್ಯ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಾದ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸೋಮವಾರ ನಮೋ ಆ್ಯಪ್‌ ಮೂಲಕ ಕರ್ನಾಟಕ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ.

ನಮ್ಮ ಯುವ ಕಾರ್ಯಕರ್ತರು ಕೇಂದ್ರ ಸರ್ಕಾರದ ಉತ್ತಮ ಕಾರ್ಯಗಳನ್ನು ಜನರಿಗೆ ತಲುಪಿಸಲು ಬಹಳ ಶ್ರಮಿಸುತ್ತಿರುವುದಾಗಿ ಟ್ವೀಟಿಸಿರುವ ಪ್ರಧಾನಿ ಮೋದಿ, ಸೋಮವಾರ(ಮೇ 7) ಬೆಳಿಗ್ಗೆ 9ಕ್ಕೆ ಕರ್ನಾಟಕ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸುತ್ತೇನೆ ಎಂದಿದ್ದಾರೆ.

ಮೇ 1ರಂದು ಬಿಜೆಪಿ ರಾಜ್ಯ ಘಟಕದ ಕಿಸಾನ್‌ ಮೋರ್ಚಾ ಕಾರ್ಯಕರ್ತರೊಂದಿಗೆ ನಮೋ ಆ್ಯಪ್‌ ಮೂಲಕವೇ ಮಾತುಕತೆ ನಡೆಸಿ ಉತ್ಸಾಹ ತುಂಬಿದ್ದರು.

ಮೇ 12ರಂದು ರಾಜ್ಯ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಿಗದಿಯಾಗಿದ್ದು, ಮೇ 15ರಂದು ಫಲಿತಾಂಶ ಹೊರ ಬೀಳಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry