ಶುಕ್ರವಾರ, ಮಾರ್ಚ್ 5, 2021
21 °C

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ

ಬೆಂಗಳೂರು: 2017-18ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಉತ್ತೀರ್ಣ ಪ್ರಮಾಣ ಶೇ 71.93ರಷ್ಟಿದೆ.

ಉಡುಪಿ ಜಿಲ್ಲೆ ಶೇ 88.18 ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದ್ದರೆ, ಯಾದಗಿರಿ ಶೇ 35.54 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ. ಸರ್ಕಾರಿ ಶಾಲೆಗಳಲ್ಲಿ ಶೇ 75.12 ರಷ್ಟು ಹಾಗೂ ರಾಜ್ಯದ 43 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಕಳೆದ ಬಾರಿ 16 ನೇ ಸ್ಥಾನದಲ್ಲಿದ್ದ ಯಾದಗಿರಿ ಈ ಬಾರಿ ಕೊನೆಯ ಸ್ಥಾನಕ್ಕೆ ಇಳಿದಿದೆ. 

1342 ಶಾಲೆಗಳು ಶೇ 100ರಷ್ಟು ಫಲಿತಾಂಶ ಪಡೆದಿವೆ.

ಎಸ್ಎಸ್ಎಲ್‌ಸಿ ಮಂಡಳಿಯಿಂದಲೇ ಪರೀಕ್ಷೆ ಬರೆದ ಎಲ್ಲರಿಗೂ ಎಸ್ಎಂಎಸ್ ಮೂಲಕ ಫಲಿತಾಂಶ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಇದೇ ಮೊದಲ ಬಾರಿ ಈ ಪ್ರಯತ್ನ ಮಾಡಲಾಗಿದೆ. ಸುಮಾರು 6 ಲಕ್ಷ ವಿದ್ಯಾರ್ಥಿಗಳು ಎಸ್ಎಂಎಸ್ ಮೂಲಕ ಫಲಿತಾಂಶ ಪಡೆಯಲಿದ್ದಾರೆ. 

http://sslc.kar.nic.in ಮತ್ತು http://karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪಡೆಯಬಹುದಾಗಿದೆ. ಶಾಲೆಗಳಲ್ಲಿ ಮೇ 8ರಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.