ಗುರುವಾರ , ಫೆಬ್ರವರಿ 25, 2021
29 °C

ಬಿಜೆಪಿ ಅಭ್ಯರ್ಥಿಗಳ ಪ್ರಚಾರಕ್ಕೆ ಅನುಮತಿ ನಿರಾಕರಣೆ: ರಿಟ್ ಅರ್ಜಿ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಜೆಪಿ ಅಭ್ಯರ್ಥಿಗಳ ಪ್ರಚಾರಕ್ಕೆ ಅನುಮತಿ ನಿರಾಕರಣೆ: ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಮಾಧ್ಯಮಗಳು ಹಾಗೂ ಖಾಸಗಿ ಟಿವಿ ವಾಹಿನಿಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಚುನಾವಣಾ ಪ್ರಚಾರಕ್ಕೆ ಕೋರಿದ್ದ ಅನುಮತಿ ತಿರಸ್ಕರಿಸಿದ ಮುಖ್ಯ ಚುನಾವಣಾಧಿಕಾರಿ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಬಿಜೆಪಿ ರಾಜ್ಯ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಈ ಅರ್ಜಿ ಸಲ್ಲಿಸಿದ್ದು, ವಕೀಲ ಪಿ. ಪವನಚಂದ್ರ ಶೆಟ್ಟಿ ವಕಾಲತ್ತು ವಹಿಸಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಅರ್ಜಿಯಲ್ಲೇನಿದೆ?

* 2018ರ ಮೇ 4ರಂದು ಬಿಜೆಪಿ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಅನುಮತಿ ಕೋರಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಅರ್ಜಿ ಸಲ್ಲಿಸಲಾಗಿತ್ತು. ಪ್ರಚಾರ ಅಭಿಯಾನದಲ್ಲಿ ಕೈಗೊಳ್ಳುವ ಅಂಶಗಳ ವಿವರಗಳನ‌್ನೊಳಗೊಂಡ ಕಾಂಪ್ಯಾಕ್ಟ್ ಡಿಸ್ಕ್ (ಸಿ.ಡಿ) ಅನ್ನೂ ಚುನಾವಣಾಧಿಕಾರಿಗೆ ನೀಡಲಾಗಿತ್ತು.

* ‘ನೀವು ಬಿತ್ತರಿಸಲು, ಪ್ರಕಟಿಸಲು ಅಥವಾ ಪ್ರಸರಿಸಲು ಉದ್ದೇಶಿಸಿರುವ ಪ್ರಚಾರ ಅಭಿಯಾನದ ಸಿ.ಡಿಯಲ್ಲಿ ಮತ್ತೊಂದು ಪಕ್ಷದ ಕಾರ್ಯಕರ್ತರ ವ್ಯಕ್ತಿತ್ವವನ್ನು ಅವಹೇಳನ ಮಾಡುವ ಮತ್ತು ವಿರೂಪಗೊಳಿಸುವ ಅಂಶಗಳಿವೆ’ ಎಂಬ ಕಾರಣ ನೀಡಿರುವ ಚುನಾವಣಾಧಿಕಾರಿಯು ನಮ್ಮ ಮನವಿಯನ್ನು ತಿರಸ್ಕರಿಸಿದ್ದಾರೆ.

* ‘ನೀವು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ರೂಲ್ಸ್- 1994ರ ನಿಯಮ 6 ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿರುತ್ತೀರಿ’ ಎಂದು ತಿಳಿಸಲಾಗಿದೆ‌. ನಮ್ಮ ಮನವಿಯ ತಿರಸ್ಕಾರಕ್ಕೆ ನೀಡಿರುವ ಕಾರಣಗಳು ಸರಿಯಲ್ಲ. ಅರ್ಜಿಯನ್ನು ತಿರಸ್ಕರಿಸಿರುವುದು ಕಾನೂನು ಬಾಹಿರ.

* ಆದ್ದರಿಂದ ನ್ಯಾಯಪೀಠ ನಮ್ಮ ಮನವಿಯನ್ನು ತುರ್ತಾಗಿ ಪರಿಗಣಿಸಿ, ಚುನಾವಣಾಧಿಕಾರಿ ನೀಡಿರುವ ತಿರಸ್ಕಾರದ ಆದೇಶಕ್ಕೆ ತಡೆ ನೀಡಬೇಕು. ಇಲ್ಲವಾದರೆ ನಮಗೆ ಭರಿಸಲಾಗದ ನಷ್ಟ ಉಂಟಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.