ಏಕರೂಪ ನಾಗರಿಕ ಸಂಹಿತೆಗೆ ವಿರೋಧ: ನಿತೀಶ್‌ ಕುಮಾರ್

7

ಏಕರೂಪ ನಾಗರಿಕ ಸಂಹಿತೆಗೆ ವಿರೋಧ: ನಿತೀಶ್‌ ಕುಮಾರ್

Published:
Updated:

ದಾವಣಗೆರೆ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ವಿಚಾರವನ್ನು ಜೆಡಿಯು ತೀವ್ರವಾಗಿ ವಿರೋಧಿಸುತ್ತದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಹೇಳಿದರು.

ಚನ್ನಗಿರಿ ತಾಲ್ಲೂಕಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜೆಡಿಯು ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ‘ಏಕರೂಪ ನಾಗರಿಕ ಸಂಹಿತೆ ಜಾರಿ ವಿಚಾರ ಸಂಬಂಧ ಎಲ್ಲ ರಾಜ್ಯಗಳು ಅಭಿಪ್ರಾಯ ತಿಳಿಸುವಂತೆ ಕೇಂದ್ರದ ಕಾನೂನು ಆಯೋಗ ಪತ್ರ ಬರೆದಿತ್ತು. ಜೆಡಿಯು ಹಿಂದಿನಿಂದಲೂ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದು, ಪಕ್ಷದ ನಿಲುವಿನಲ್ಲಿ ಬದಲಾವಣೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.

‘ಬಿಹಾರದಲ್ಲಿ ಜೆಡಿಯು ಬಿಜೆಪಿ ಮೈತ್ರಿ ಸರ್ಕಾರ ಇದ್ದರೂ, ಪಕ್ಷದ ತತ್ವ, ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆದುಕೊಂಡಿಲ್ಲ’ ಎಂದರು.

‘ಎಂತಹ ಸಂದರ್ಭದಲ್ಲೂ ಕೋಮುವಾದವನ್ನು ಬೆಂಬಲಿಸಿಲ್ಲ. ಅಪರಾಧ, ಭ್ರಷ್ಟಾಚಾರ ವಿಚಾರಗಳಲ್ಲಿ ರಾಜಿ ಮಾಡಿಕೊಂಡಿಲ್ಲ. ಜೆಡಿಯು ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣುತ್ತದೆ. ಇದರಲ್ಲಿ ಯಾವುದೇ ಅನುಮಾನವೂ ಬೇಡ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry