ಕಾಂಗ್ರೆಸ್ ಪರ ಮತಕ್ಕೆ ಪ್ರೇರಣೆ: ಪ್ರಾಧ್ಯಾಪಕಿ ಅಮಾನತು

ರಾಯಚೂರು: ಕಾಂಗ್ರೆಸ್‌ಗೆ ಮತ ನೀಡುವಂತೆ ಪ್ರೇರೆಪಿಸಿದ್ದಕ್ಕಾಗಿ ರಾಯಚೂರು ಕೃಷಿ ವಿವಿ ವ್ಯಾಪ್ತಿಯ ಕೃಷಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆಯನ್ನು ತಕ್ಷಣವೆ ಜಾರಿಗೆ ಬರುವಂತೆ ಮೂರು ತಿಂಗಳು ಅಮಾನತುಗೊಳಿಸಿ ವಿಶ್ವವಿದ್ಯಾಲಯದ ಕುಲಸಚಿವ ಜಂಬುನಾಥ ಗುತ್ತಿ ಸೋಮವಾರ ಆದೇಶ ಹೊರಡಿಸಿದ್ದಾರೆ.
ಬಳ್ಳಾರಿ ಸಂಸದ ಶ್ರೀರಾಮುಲು ವಿರುದ್ಧ ಮತ್ತು ಕಾಂಗ್ರೆಸ್ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷಪಾತದ ಅಭಿಪ್ರಾಯಗಳನ್ನು ದೇಶಮಾನ್ಯ ಅವರು ವ್ಯಕ್ತಪಡಿಸಿದ್ದಾರೆ ಎನ್ನುವ ದೂರು ಆಧರಿಸಿ ಜಿಲ್ಲಾ ಚುನಾವಣಾಧಿಕಾರಿ ಡಾ.ಬಗಾದಿ ಗೌತಮ್ ಅವರು ವಿಚಾರಣೆ ನಡೆಸಿದ್ದರು.
ದೇಶಮಾನ್ಯ ಅವರು ಪರೋಕ್ಷವಾಗಿ ರಾಜಕೀಯ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳಿಂದ ಗೊತ್ತಾಗಿದ್ದು, ಇವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾ ಚುನಾವಣಾಧಿಕಾರಿ ಈಚೆಗೆ ಶಿಫಾರಸು ಮಾಡಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.