ಶುಕ್ರವಾರ, ಫೆಬ್ರವರಿ 26, 2021
31 °C

ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರೊಫೆಸರ್‍‍ಗೆ ವಿದ್ಯಾರ್ಥಿನಿಯರಿಂದ ಥಳಿತ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರೊಫೆಸರ್‍‍ಗೆ ವಿದ್ಯಾರ್ಥಿನಿಯರಿಂದ ಥಳಿತ

ಪಂಜಾಬ್: ಪಟಿಯಾಲದ ಮಹಿಳೆಯರ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರೊಫೆಸರ್‍‍ಗೆ ವಿದ್ಯಾರ್ಥಿನಿಯರು ಥಳಿಸುತ್ತಿರುವ ವಿಡಿಯೊ ವೈರಲ್ ಆಗಿದೆ.

ಪ್ರೊಫೆಸರ್‍‌ಗೆ ವಿದ್ಯಾರ್ಥಿನಿಯರು ಥಳಿಸುತ್ತಿರುವ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದ್ದು, ಈ ವಿಡಿಯೊವನ್ನು ಎಎನ್‍ಐ ಸುದ್ದಿ ಸಂಸ್ಥೆ ಶೇರ್ ಮಾಡಿದೆ.

ಈ  ಹಿಂದೆ ಜವಾಹರ್ ಲಾಲ್ ನೆಹರೂ ವಿಶ್ವ ವಿದ್ಯಾನಿಲಯದ ಪ್ರೊಫೆಸರ್ ವಿದ್ಯಾರ್ಥಿನಿಯರಿಗೆ ದೌರ್ಜನ್ಯವೆಸಗಿದ ಘಟನೆ ವರದಿಯಾಗಿತ್ತು. ಆ ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದ್ದು, ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರೊಫೆಸರ್ ನ್ನು ಪೊಲೀಸರು ಬಂಧಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.