ಪಕ್ಷದ ಅಭ್ಯರ್ಥಿ ವಿರುದ್ಧವೇ ಹೇಳಿಕೆ ನೀಡಿದ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ!

7

ಪಕ್ಷದ ಅಭ್ಯರ್ಥಿ ವಿರುದ್ಧವೇ ಹೇಳಿಕೆ ನೀಡಿದ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ!

Published:
Updated:
ಪಕ್ಷದ ಅಭ್ಯರ್ಥಿ ವಿರುದ್ಧವೇ ಹೇಳಿಕೆ ನೀಡಿದ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ!

ಬೆಂಗಳೂರು: 'ಹೆಬ್ಬಾಳದ ಜೆಡಿಎಸ್ ಅಭ್ಯರ್ಥಿ ಹನುಮಂತೇಗೌಡ ಕಳಂಕಿತ ವ್ಯಕ್ತಿ ಆಗಿದ್ದು ಜನರು ಅವರಿಗೆ ಮತ ನೀಡಬಾರದು' ಎಂದು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ‌ ಎನ್. ಆರ್. ಉಷಾ ದೇವಿ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 'ಇಂಥ ವ್ಯಕ್ತಿಗೆ ಟಿಕೆಟ್‌ ನೀಡಿರುವುದರಿಂದ ಪಕ್ಷದ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ 6 ತಿಂಗಳ ಹಿಂದೆಯೇ ದೇವೇಗೌಡ ಅವರಿಗೂ ಸಾಕ್ಷಿ ಸಹಿತ ಮಾಹಿತಿ ನೀಡಿದ್ದೆ. ಆದರೂ ಅವರಿಗೆ ಟಿಕೆಟ್ ನೀಡಲಾಗಿದೆ' ಎಂದರು.

'ಹನುಮಂತೇಗೌಡ ಜೆಡಿಎಎಸ್‌ನಿಂದ ಚುನಾವಣೆಗೆ ಸ್ಪರ್ಧಿಸಿದ್ದರೂ ಪರೋಕ್ಷವಾಗಿ ಕಾಂಗ್ರೆಸ್‌ ಅನ್ನು ಬೆಂಬಲಿಸುತ್ತಿದ್ದಾರೆ' ಎಂದು ಆರೋಪಿಸಿರುವ ಅವರು, 'ಭೂಕಬಳಿಕೆ ಆರೊಪ ಇರುವ ಹನುಮಂತೇಗೌಡ ಅವರನ್ನು ಜೈಲಿಗೆ ಹಾಕಿಸುವವರೆಗೆ ನನ್ನ ಹೋರಾಟ ನಿಲ್ಲುವುದಿಲ್ಲ. ಜೈಲಿಗೆ ಹೋಗುವ ವ್ಯಕ್ತಿಗೆ ಮತ ಹಾಕಬೇಕೊ ಬೇಡವೋ ಎಂದು ಜನರು ಪ್ರಜ್ಞಾಪೂರ್ವಕವಾಗಿ ಯೋಚಿಸಬೇಕು’ ಎಂದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry