ಮೋದಿ, ಶಾ, ಬಿಎಸ್‌ವೈಗೆ ಸಿ.ಎಂ ನೋಟಿಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರಿಂದ ಮಾನ ಹಾನಿಯಾಗಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಮೂವರಿಗೂ ನೋಟಿಸ್ ಕಳುಹಿಸಿದ್ದಾರೆ.
‘ತಕ್ಷಣವೇ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ₹ 100 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ಹೂಡಲಾಗುವುದು’ ಎಂದೂ ನೋಟಿಸ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.
ಮುದ್ರಣ, ಟಿವಿ ಮಾಧ್ಯಮ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಬಿಜೆಪಿ ಪ್ರಕಟಿಸಿದ ಜಾಹೀರಾತುಗಳು ಸುಳ್ಳು ಮಾಹಿತಿಗಳಿಂದ ಕೂಡಿತ್ತು ಎಂದು ದೂರಿರುವ ಸಿದ್ದರಾಮಯ್ಯ, ಬಿಜೆಪಿ ಪ್ರಧಾನ ಕಾರ್ಯದರ್ಶಿಗೂ ನೋಟಿಸ್ ಕಳುಹಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.