ಇದೇ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದ ಸಿದ್ದರಾಮಯ್ಯ
ಆನಂದ್ ಸಿಂಗ್ ಒಡೆತನದ ಬಾದಾಮಿಯ ಕೃಷ್ಣಾ ಹೆರಿಟೇಜ್ ರೆಸಾರ್ಟ್ ಮೇಲೆ ಐಟಿ ದಾಳಿ

ಬಾದಾಮಿ: ಬಾದಾಮಿಯಲ್ಲಿರುವ ಹೊಸಪೇಟೆ (ವಿಜಯನಗರ) ಶಾಸಕ ಆನಂದ್ ಸಿಂಗ್ ಒಡೆತನದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ಮೇಲೆ ಸೋಮವಾರ ತಡರಾತ್ರಿ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಹುಬ್ಬಳ್ಳಿ ರಸ್ತೆಯಲ್ಲಿರುವ ರೆಸಾರ್ಟ್‌ನಲ್ಲಿ ಎರಡು ದಿನಗಳ ಹಿಂದೆ ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಕೃಷ್ಣಾ ಹೆರಿಟೇಜ್ ಕಾಂಗ್ರೆಸ್ ಮುಖಂಡರ ಕಾರ್ಯಕ್ಷೇತ್ರವಾಗಿತ್ತು.
ಐಟಿ ಅಧಿಕಾರಿಗಳ ದಾಳಿ ವೇಳೆ ರೆಸಾರ್ಟ್‌ನಲ್ಲಿ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ವಾಸ್ತವ್ಯ ಹೂಡಿದ್ದರು ಎಂದು ತಿಳಿದುಬಂದಿದೆ. ದಾಖಲೆಗಳ ಪರಿಶೀಲನೆ ಈಗಲೂ ಮುಂದುವರೆದಿದ್ದು, ಅರೆಸೇನಾ ಪಡೆ ಹಾಗೂ ಸ್ಥಳೀಯ ಪೊಲೀಸರು ರೆಸಾರ್ಟ್‌ಗೆ ಭದ್ರತೆ ಒದಗಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.