ಕಾಂಗ್ರೆಸ್‌ ಬಗ್ಗೆ ಮಾತನಾಡಲು ಶಾಗೆ ನೈತಿಕತೆ ಇಲ್ಲ– ರಾಹುಲ್‌

7

ಕಾಂಗ್ರೆಸ್‌ ಬಗ್ಗೆ ಮಾತನಾಡಲು ಶಾಗೆ ನೈತಿಕತೆ ಇಲ್ಲ– ರಾಹುಲ್‌

Published:
Updated:
ಕಾಂಗ್ರೆಸ್‌ ಬಗ್ಗೆ ಮಾತನಾಡಲು ಶಾಗೆ ನೈತಿಕತೆ ಇಲ್ಲ– ರಾಹುಲ್‌

ಬೆಂಗಳೂರು: ‘ಕೊಲೆ ಪ್ರಕರಣ ಆರೋಪಿಯಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾಗೆ ಕಾಂಗ್ರೆಸ್ ಬಗ್ಗೆ ಮಾತಾನಾಡುವ ನೈತಿಕತೆ ಇಲ್ಲ’ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು.

ಮಾಧ್ಯಮ ಪ್ರತಿನಿಧಿಗಳ ಜತೆ ಮಂಗಳವಾರ ಮಾತನಾಡಿದ ಅವರು,‘ಗಣಿ ಅಕ್ರಮದಲ್ಲಿ ಭಾಗಿಯಾಗಿ ಕೋಟ್ಯಂತರ ಮೊತ್ತ ಲೂಟಿ ಮಾಡಿದ ರೆಡ್ಡಿ ಸಹೋದರನ್ನು ಜೊತೆಗಿಟ್ಟು ಬಿಜೆಪಿ ಚುನಾವಣೆ ಎದುರಿಸುತ್ತಿದೆ’ ಎಂದೂ ದೂರಿದರು.

‘ರಾಜ್ಯದ ಮತದಾರರಿಗೆ ಇದೆಲ್ಲ ಗೊತ್ತಿದೆ. ಪ್ರಧಾನಿ ಮೋದಿ ನೀಡಿದ ಯಾವುದೇ ಭರವಸೆಗಳನ್ನೂ ಈಡೇರಿಸಿಲ್ಲ. ಉದ್ಯೋಗ ಸೃಷ್ಟಿ ಮಾಡುವಲ್ಲಿಯೂ ಅವರು ವಿಫಲರಾಗಿದ್ದಾರೆ. ಈ ಬಗ್ಗೆ ಯುವ ವರ್ಗಕ್ಕೆ ಅವರು ಉತ್ತರ ನೀಡಬೇಕು’ ಎಂದರು.

‘ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ’ ಎಂದೂ ವಿಶ್ವಾಸ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry