ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳ ಬಿರುಸಿನ ಪ್ರಚಾರ

7

ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳ ಬಿರುಸಿನ ಪ್ರಚಾರ

Published:
Updated:

ಧಾರವಾಡ: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೆ ದಿನಗಳು ಬಾಕಿ ಇರುವಂತೆ ಜಿಲ್ಲೆಯಲ್ಲೂ ಚುನಾವಣಾ ಪ್ರಚಾರದ ಭರಾಟೆ ಹೆಚ್ಚಾಗಿದೆ. ಧಾರವಾಡ ಮತ್ತು ಧಾರವಾಡ ಪಶ್ಚಿಮ ಕ್ಷೇತ್ರಗಳ ಅಭ್ಯರ್ಥಿಗಳು ಬಿರು ಬಿಸಿಲು ಲೆಕ್ಕಿಸದೆ ಮತದಾರರ ಮನವೊಲಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿ ಉಪ್ಪಿನ ಬೆಟಗೇರಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಮನೆ, ಮನೆಗೆ ತೆರಳಿ ಕಾಂಗ್ರೆಸ್‌ ಪಕ್ಷದ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿ ಮತ್ತೊಮ್ಮೆ ಅವಕಾಶ ನೀಡುವಂತೆ ಮನವಿ ಮಾಡಿದರು.

ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ತಾಲ್ಲೂಕಿನ ಮಾರಡಗಿ ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು.ಉರಿ ಬಿಸಿಲಿನಲ್ಲೂ ಬಿರುಸಿನ ಪ್ರಚಾರ ನಡೆಸಿದ ಅವರು ಈ ಬಾರಿ ಕ್ಷೇತ್ರದಲ್ಲಿ ಕಮಲ ಅರಳಿಸುವಂತೆ ಮನವಿ ಮಾಡಿದರು. ಅಶೋಕ ಕಣಕಿಕೊಪ್ಪ, ಶೇಕಪ್ಪ ಕುಸುಗಲ್, ಗಂಗಾಧರ ಕುಸುಗಲ್, ರಾಜು ಹೆಬ್ಬಳ್ಳಿ, ಮುಕ್ತಾರ ಅಲಿ ಗೋಡಿ, ಮುರಗೇಶ ಇದ್ದರು.

ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ ನಗರದ ವಿವಿಧ ವಾರ್ಡಗಳಲ್ಲಿ ಸಂಚರಿಸಿದರು.

ಇದೇ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಸ್ಮಾಯಿಲ್ ತಮಟಗಾರ ನಗರದ ಶ್ರೀರಾಮನಗರ, ಅತ್ತಿಕೊಳ್ಳದಲ್ಲಿ ರೋಡ್‌ ಶೋ ನಡೆಸಿ ಮತಯಾಚಿಸಿದರು. ಜತೆಗೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ರೋಡ್‌ ಶೋ ನಲ್ಲಿ ಮುಖಂಡರಾದ ದಾನಪ್ಪ ಕಬ್ಬೇರ, ವಸಂತ ಅರ್ಕಾಚಾರ, ಮಹೇಶ ಶೆಟ್ಟಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry