ಅಫ್ಗಾನಿಸ್ತಾನ, ಐರ್ಲೆಂಡ್, ಇಂಗ್ಲೆಂಡ್ ವಿರುದ್ಧದ ಕ್ರಿಕೆಟ್ ಪಂದ್ಯಗಳು: ಭಾರತ ತಂಡದಲ್ಲಿ ಶ್ರೇಯಸ್ ಅಯ್ಯರ್, ರಾಯುಡುಗೆ ಸ್ಥಾನ

ಬೆಂಗಳೂರು: ಅಫ್ಗಾನಿಸ್ತಾನ ಎದುರಿನ ಏಕೈಕ ಟೆಸ್ಟ್ ಪಂದ್ಯ ಹಾಗೂ ಐರ್ಲೆಂಡ್ ಮತ್ತು ಇಂಗ್ಲೆಂಡ್ ನಡುವಿ ಟಿ20 ಪಂದ್ಯಕ್ಕೆ ಬಿಸಿಸಿಐ ಭಾರತೀಯ ತಂಡವನ್ನು ಮಂಗಳವಾರ ಪ್ರಕಟಿಸಿದೆ.
ಎಂ.ಎಸ್.ಕೆ.ಪ್ರಸಾದ್ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿ ಮಂಗಳವಾರ ಸಭೆ ನಡೆಸಿ ತಂಡವನ್ನು ಪ್ರಕಟಿಸಿದೆ. ಅಫ್ಗಾನಿಸ್ತಾನ ಎದುರಿನ ಟೆಸ್ಟ್ ಪಂದ್ಯದ ಸಾರಥ್ಯವನ್ನು ಅಜಿಂಕ್ಯ ರಹಾನೆಗೆ ನೀಡಲಾಗಿದ್ದು. ಅಂಬುಟಿ ರಾಯುಡುಗೆ ಸ್ಥಾನ ನೀಡಲಾಗಿದೆ.
ಅಫ್ಗಾನಿಸ್ತಾನ ಎದುರಿನ ಟೆಸ್ಟ್ ಪಂದ್ಯದ ಭಾರತೀಯ ತಂಡ: ಅಜಿಂಕ್ಯ ರಹಾನೆ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಮುರಳಿ ವಿಜಯ್, ಚೇತೇಶ್ವರ್ ಪೂಜಾರಾ, ಕರುಣ್ ನಾಯರ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ, ಶಾರ್ದೂಲ್ ಠಾಕೂರ್
ಇದೇ ವೇಳೆ ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟ್ವೆಂಟಿ–20 ಕ್ರಿಕೆಟ್ ಸರಣಿಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು ಭಾರತ ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸುರೇಶ್ ರೈನಾ, ಮನೀಶ್ ಪಾಂಡೆ, ದೋನಿ(ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಚಹಾಲ್, ಕುಲದೀಪ್ ಯಾದವ್, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಬೂಮ್ರ, ಕೌಲ್.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಏಕ ದಿನ ಪಂದ್ಯಕ್ಕೂ ತಂಡವನ್ನು ಆಯ್ಕೆ ಮಾಡಿ ಪ್ರಕಟಗಸಿದೆ.
ಟಿ20 ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸುರೇಶ್ ರೈನಾ, ಮನೀಶ್ ಪಾಂಡೆ, ದೋನಿ(ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಚಹಾಲ್, ಕುಲದೀಪ್ ಯಾದವ್, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಬೂಮ್ರ, ಕೌಲ್.
ಏಕದಿನ ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಅಂಬುಟಿ ರಾಯುಡು, ದೋನಿ(ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಚಹಾಲ್, ಕುಲದೀಪ್ ಯಾದವ್, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಬೂಮ್ರ, ಕೌಲ್.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.