ಮಳವಳ್ಳಿ (ಮಂಡ್ಯ): ಮಳವಳ್ಳಿಯ ಕಾಂಗ್ರೆಸ್ ಅಭ್ಯರ್ಥಿ ನರೇಂದ್ರ ಸ್ವಾಮಿ ಪರ ಪ್ರಚಾರ ಕೈಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನರೇಂದ್ರ ಸ್ವಾಮಿ ಎನ್ನುವ ಬದಲು ನರೇಂದ್ರ ಮೋದಿಗೆ ಮತ ನೀಡಿ ಎಂದು ಹೇಳುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ.

ಮಂಗಳವಾರ ನರೇಂದ್ರ ಸ್ವಾಮಿ ಪರವಾಗಿ ಪ್ರಚಾರ ಕೈಗೊಂಡಗದ್ದರು. ತಮ್ಮ ಪ್ರಚಾರ ಭಾಷಣದಲ್ಲಿ ನರೇಂದ್ರ ಸ್ವಾಮಿಗೆ ಮತ ನೀಡಿ ಎನ್ನುವ ಬದಲು ನರೇಂದ್ರ ಮೋದಿಗೆ ಹಾಕಿ ಎಂದು 4 ಬಾರಿ ಹೇಳಿದ್ದಾರೆ. ಈ ರೀತಿ ಮಾತನಾಡರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಕ್ಕದಲ್ಲೇ ಇದ್ದ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ತಪ್ಪನ್ನು ತಿದ್ದಿದರು. ಆಗಾ ಸಿದ್ದರಾಮಯ್ಯ ನರೇಂದ್ರ ಮೋದಿ ಮಿತ್ಯ, ನರೇಂದ್ರ ಸ್ವಾಮಿ ಸತ್ಯ ಎಂದರು.

ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಅವರು ಸಿದ್ದರಾಮಯ್ಯ ಭಾಷಣದ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಹಾಗೇ ಐದು ವರ್ಷಗಳಲ್ಲಿ ಸಿದ್ದರಾಮಯ್ಯ ಹೇಳಿದ ಮೊದಲನೇ ಸತ್ಯ. ಕೊನೆಗೂ ಸತ್ಯ ಒಪ್ಪಿಕೊಂಡರು ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.